ಬೆಂಗಳೂರು: ಎಂಜಿನಿಯರಿಂಗ್ ನಾವೀನ್ಯತೆ ಮತ್ತು ಅಧಿಕ ಮೌಲ್ಯದ ಮೂಲಸೌಕರ್ಯ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (ಎನ್.ಐ.ಎ.ಎಲ್) ಹಸ್ತಾಂತರಿಸಿದರು.. ಭಾರತದಲ್ಲಿ ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ.
ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ ಲೆಂಡ್ ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.
ವಿಮಾನದ ಟಯರ್ ಗಳಿಗೆ ಅಪಾಯಕಾರಿಯಾಗಬಹುದಾದ ಮೊಳೆಗಳು ಹಾಗೂ ಚೂಪಾದ ಲೋಹದ ತುಣುಕುಗಳನ್ನು ರನ್ ವೇ ಮೇಲಿಂದ ತೆರವುಗೊಳಿಸುವ ಕಾರ್ಯವನ್ನು ಈ ವಾಹನ ಮಾಡಲಿದೆ. ಧೂಳನ್ನೂ ಹೀರಿಕೊಳ್ಳಲಿದೆ. ಜೊತೆಗೆ, ಮುಖ್ಯವಾಗಿ ವಿಮಾನಗಳು ಇಳಿಯುವಾಗ ರನ್ ವೇಯಲ್ಲಿ ಜಾರುವ ಸಾಧ್ಯತೆ ತಂದೊಡ್ಡಬಹುದಾದ ಪಾಚಿಯನ್ನು ತೆಗೆದುಹಾಕುವ ಕಾರ್ಯವನ್ನು ಇದು ನಿರ್ವಹಿಸಲಿದೆ.
ನಗರದ ರಸ್ತೆಗಳನ್ನು ಸ್ವಚ್ಛ ಮಾಡುವ ಸ್ವೀಪಿಂಗ್ ಮಿಷಿನ್ ವಾಹನಗಳ ತಯಾರಿಕೆಗೂ ಗಮನ ಕೇಂದ್ರೀಕರಿಸಿರುವ ಆನ್ ಲಾನ್ ನಂತಹ ಕಂಪನಿಗಳು ನಮ್ಮ ಪೂರೈಕೆ ಸರಪಳಿಯ ಬುನಾದಿಯಾಗಿವೆ. ಆನ್ ಲಾನ್ ಕಂಪನಿಯು ಸರ್ಕಾರದ ನೀತಿಗಳು ಹಾಗೂ ಕಾರ್ಯಪರಿಸರವನ್ನು ಬಳಸಿಕೊಂಡು ಈಗ ತಯಾರಿಸಿರುವ ವಾಹನಕ್ಕೆ ರಫ್ತು ಮಾರುಕಟ್ಟೆಗಳನ್ನು ಶೋಧಿಸಿಕೊಳ್ಳಬೇಕು. ನಮ್ಮ ಕೈಗಾರಿಕಾ ನೀತಿಯು (2025-30) ಗುರಿ ನಿರ್ದೇಶಿತ ಬೆಂಬಲ ಹಾಗೂ ಗುಣಮಟ್ಟ ಪ್ರಮಾಣಪತ್ರ ಪ್ರೋತ್ಸಾಹಕ ಕ್ರಮಗಳ ಮೂಲಕ ಆನ್ ಲಾನ್ ನಂತಹ ಕಂಪನಿಗಳಿಗೆ ಉತ್ತೇಜನ ನೀಡುತ್ತದೆ ಎಂದರು.
ಕಾರ್ಯಕ್ರಮದ ನಂತರದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಫಾಕ್ಸ್ ಕಾನ್ ಕಂಪನಿಯು ಸದ್ಯ 30,000 ಜನರಿಗೆ ಉದ್ಯೋಗ ನೀಡಿದ್ದು, ಇದರಲ್ಲಿ ಶೇ 80ರಷ್ಟು ಮಂದಿ ಮಹಿಳೆಯರೇ ಇರುವುದು ಸಂತಸದ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಚೀನಾ ಮತ್ತು ವಿಯೆಟ್ನಾಂ ರೀತಿ ತಯಾರಿಕಾ ವಲಯದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ನಂತರದ ಸ್ಥಳೀಯ ಉದ್ಯಮಿಗಳ ಜತೆಗೂ ಸಚಿವರು ಮಾತನಾಡಿದರು. ಕೆಲವರು ತಮ್ಮ ಉದ್ಯಮ ವಿಸ್ತರಿಸಲು ಭೂಮಿ ಕೇಳುತ್ತಿದ್ದು, ಇದನ್ನು ಲಭ್ಯವಾಗಿಸಲಾಗುವುದು ಎಂದು ಭರವಸೆ ನೀಡಿದರು.
ಮಾಜಿ ಶಾಸಕ ವೆಂಕಟರಮಣ, ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಉನ್ನಿಕೃಷ್ಣನ್ ನಾಯರ್ ಪಿ.ಎಂ, ಲೆಕ್ಕಪರಿಶೋಧಕ ಜಿ.ಜಿ.ಪಾಟೀಲ, ನೋಯ್ದಾ ವಿಮಾನ ನಿಲ್ದಾಣದ ಲೀಡ್ ಗ್ರೌಂಡ್ ವಿನೋದ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…