ನಮ್ಮ ಸಂವಿಧಾನವು ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜೆಸಿಐಯುಟಿ ಜಿಲ್ಲಾ ಉಪಾಧ್ಯಕ್ಷ ಪಿ.ಎ.ವೆಂಕಟೇಶ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಮ್ಮ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ದೊರಕಿವೆ. ಆದ್ದರಿಂದ ನಮ್ಮ ದೇಶದ ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸಬೇಕು. ಅದರಲ್ಲಿ ಇರುವ ನಿಯಮಗಳನ್ನು ಅನುಸರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ್, ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್, ತೂಬಗೆರೆ ಹೋಬಳಿ ಘಟಕದ ಅಧ್ಯಕ್ಷ ಟಿ.ಆರ್.ಕುಮಾರ್, ಗೌರವ ಕಾರ್ಯದರ್ಶಿ ಗಿರೀಶ್ ಎನ್.ಬರಗೂರು, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಮುನಿರಾಜು, ಷಪೀರ್, ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ರೇಣುಕಾರಾಧ್ಯ, ಅನಿಲ್ ಗುಪ್ತಾ, ಸಾಧಿಕ್, ನರೇಂದ್ರಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…