ದೇಶದ ಸ್ವಾತಂತ್ರ್ಯ ಚಳವಳಿಗಳಲ್ಲಿ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ಭಾಗಿ- ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್

ಭಾರತ ದೇಶದ ಸ್ವಾತಂತ್ರ್ಯ ಚಳುವಳಿಗಳಾದ ವಿದುರಾಶ್ವತ್ಥ ಹೋರಾಟ, ಶಿವಪುರ ಧ್ವಜ ಸತ್ಯಾಗ್ರಹ, ಬೆಳಗಾವಿ ಕಾಂಗ್ರೆಸ್ ಅಧಿವೇಶನ, ದಂಡಿ ಉಪ್ಪಿನ ಸತ್ಯಾಗ್ರಹ ಮುಂತಾದ ಹಲವಾರು ಮಹತ್ವದ ಹೋರಾಟಗಳಲ್ಲಿ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ 78ನೇ ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಅನನ್ಯವಾಗಿದೆ ಎಂದುರು.

ದೊಡ್ಡಬಳ್ಳಾಪುರ ತಾಲ್ಲೂಕಿನ ‌ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರೆಂದರೆ ಮೈಸೂರು ಕಾಂಗ್ರೆಸ್ ಮೊದಲ  ಅಧ್ಯಕ್ಷರಾದ ಟಿ.ಸಿದ್ದಲಿಂಗಯ್ಯ, ಅಂತಾರಾಷ್ಟ್ರೀಯ ಚಿತ್ರ ಕಲಾವಿದ ರುಮಾಲೆ ಚನ್ನಬಸವಯ್ಯ, ಎಚ್.ಮುಗುವಾಳಪ್ಪ, ರುಮಾಲೆ ಭದ್ರಯ್ಯ,  ನಾ.ನಂಜುಂಡಯ್ಯ, ಡಿ.ದಾನಪ್ಪ, ಟಿ.ಸುನಂದಮ್ಮ, ರಾಮಯ್ಯ ಮೇಷ್ಟ್ರು ಮುಂತಾದ ನೂರಾರು ಸ್ವಾತಂತ್ರ್ಯ ಹೋರಾಟಗಾರರು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮಾತ್ರವಲ್ಲದೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿಯೂ  ಚಳುವಳಿಯಲ್ಲಿ ಭಾಗವಹಿಸಿದ್ದರು ಎಂದರು.

ದೊಡ್ಡಬಳ್ಳಾಪುರಕ್ಕೆ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಕಸ್ತೂರ ಬಾ ಮುಂತಾದವರು   ದೊಡ್ಡಬಳ್ಳಾಪುರಕ್ಕೆ ಬರಲು ಸ್ವಾತಂತ್ರ್ಯ ಹೋರಾಟಗಾರರಾದ ಟಿ. ಸಿದ್ದಲಿಂಗಯ್ಯ, ರುಮಾಲೆ ಚನ್ನಬಸಪ್ಪ, ಎಚ್.ಮುಗುವಾಳಪ್ಪ ಮುಂತಾದವರು ಕಾರಣರಾಗಿದ್ದಾರೆ. ಇವರುಗಳ ‌ಸ್ಫೂರ್ತಿಯಿಂದ  ದೊಡ್ಡಬಳ್ಳಾಪುರ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಜನರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವಂತೆ ಮಾಡಿದರು ಎಂದು ಹೇಳಿದರು.

ಭಾರತ ಸ್ವಾತಂತ್ರ್ಯ ನಂತರವು ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ಹಲವಾರು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ನಿರತರಾಗಿದ್ದರು. ರೈತರ ಮತ್ತು ದುರ್ಬಲರ  ಪರವಾದ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು.  ಪ್ರಾಮಾಣಿಕತೆ ಮತ್ತು ಆದರ್ಶದ ಮೌಲ್ಯಗಳೊಂದಿಗೆ ಜೀವಿಸಿದ್ದ ದೊಡ್ಡಬಳ್ಳಾಪುರ ಸ್ವಾತಂತ್ರ್ಯ ಹೋರಾಟಗಾರರು ತಾಲ್ಲೂಕಿನ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದರು. ಇವರ ಪ್ರೇರಣೆ ಮತ್ತು ಪ್ರಭಾವದಿಂದ ಹಲವು ಜನಪರ ಚಳುವಳಿಗಳಲ್ಲಿ  ಸಾವಿರಾರು ಜನರು ಭಾಗವಹಿಸುತ್ತಿದ್ದರು ಎಂದು ಇಂದಿಗೂ ಜನರು ಸ್ಮರಿಸುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿಗಳಾದ ಮುನಿರಾಜು, ನಾಗರತ್ನಮ್ಮ, ಷಫೀರ್, ಕಸಬಾ ಹೋಬಳಿ   ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ನಾಗರಾಜು, ತೂಬಗೆರೆ ಹೋಬಳಿ ಕೋಶಾಧ್ಯಕ್ಷ ಉದಯರಾಧ್ಯ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜ ಶಿರವಾರ,  ದರ್ಗಾಜೋಗಿಹಳ್ಳಿ ಮಲ್ಲೇಶ್, ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗಾಜ್, ತಾಲ್ಲಾಕು ಅಧ್ಯಕ್ಷ ಶಶಿಧರ್,  ಯುವಘಟಕದ ದರ್ಶನ್, ಮಂಜುನಾಥ ಕಲಾ ಸಂಘದ ಚಿತ್ರಲಿಂಗಯ್ಯ, ಮಂಜುನಾಥ್, ನಾಗದಳ ನಟರಾಜು ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

2 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

4 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

17 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

19 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

22 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

1 day ago