ದೇಶ ಕಾಯುವ ಸೈನಿಕರ ಸೇವೆ ಅಪಾರ. ಸೈನಿಕರ ತ್ಯಾಗ ಬಲಿದಾನಗಳು ನಿಜಕ್ಕೂ ಅಮೂಲ್ಯವಾದದ್ದು ಎಂದು ಶ್ರೀ ಕೊಂಗಾಡಿಯಪ್ಪ ಕಾಲೇಜು ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆದ ಪುಲ್ವಾಮ ದಾಳಿ ಹುತಾತ್ಮರ ಸಂಸ್ಮರಣಾ ದಿನದಂದು ಹುತಾತ್ಮರಾದ ಸೈನಿಕರಿಗೆ ನಮನ ಸಲ್ಲಿಸಿ ಅವರು ಮಾತನಾಡಿದರು.
ಪುಲ್ವಾಮ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ರಾಷ್ಟ್ರ ರಕ್ಷಣೆಯ ಮಹತ್ ಕಾರ್ಯದಲ್ಲಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ – ಬಲಿದಾನವನ್ನು ಸ್ಮರಿಸಬೇಕು ಎಂದರು.
ಪ್ರತಿ ಪ್ರಾಂಶುಪಾಲ R. N. ಪಂಚಾಕ್ಷರಯ್ಯ ಮಾತನಾಡಿ, ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು ಎಂದರು.
ಈ ವೇಳೆ ಸಂಸ್ಥೆಯ ನಿರ್ದೇಶಕ ಕೃಷ್ಣಮೂರ್ತಿ, ಎನ್ ಸಿಸಿ ಅಧಿಕಾರಿ Lt. ಪ್ರವೀಣ್, ಎನ್ ಸಿಸಿ ಕ್ಯಾಡೆಟ್ಸ್ ಸೇರಿದಂತೆ ಇತರರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…