ದೊಡ್ಡತುಮಕೂರು ಗ್ರಾಮ ಪಂಚಾಯತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

ಶೇ.90ರಷ್ಟು ಸ್ಥಳೀಯವಾಗಿ ಬಗೆಹರಿಸುವಂತಹ ಸಮಸ್ಯೆಗಳು ಬಂದಿವೆ. ಕೂಡಲೇ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಗ್ರಾಮ ಪಂಚಾಯತಿಯಲ್ಲಿ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಹಯೋಗದೊಂದಿಗೆ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗ್ರಾಮ ಪಂಚಾಯಿತಿ ಪಿಡಿಒ‌ ಮೇಲೆ ಹಲವು ಆರೋಪಗಳು ಬಂದಿವೆ. ಕೂಡಲೇ ಅವರು ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮತ್ತೆ ಜನರಿಂದ ದೂರುಗಳು ಬಂದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಸ್ಮಶಾನಗಳಿಗೆ ದಾರಿ, ರಸ್ತೆ ದುರಸ್ತಿ, ಹೊಸ ರಸ್ತೆ ಕಾಮಗಾರಿ, ಚರಂಡಿ ದುರಸ್ತಿ, ಪಡಿತರ ಕೇಂದ್ರ ಸ್ಥಾಪನೆ, ಆಟದ ಮೈದಾನಕ್ಕೆ ಜಾಗ ಮಂಜೂರಿಗೆ ಸಂಬಂಧಿಸಿದಂತೆ ಅಹವಾಲುಗಳು ಬಂದಿವೆ. ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಇತ್ಯರ್ಥಪಡಿಸುವುದಾಗಿ ತಿಳಿಸಿದರು.

ಆಶ್ರಯ ಯೋಜನೆ ಸೈಟ್ ಒಂದು ತಿಂಗಳೊಳಗೆ ಫಲಾನುಭವಿಗಳ ಪಟ್ಟಿ ತಯಾರಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಾ ಮಂಜುನಾಥ್, ಉಪಾಧ್ಯಕ್ಷೆ ಸವಿತಾ ರವಿಕುಮಾರ್,  ಪಿಡಿಒ ಪ್ರಸನ್ನ ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಜಿ.ಮಂಜುನಾಥ್, ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಕಾಶ್, ಮುನಿಕೃಷ್ಣಪ್ಪ ಸೇರಿದಂತೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು, ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 hour ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

4 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

6 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

8 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

8 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

8 hours ago