ದೊಡ್ಡಬಳ್ಳಾಪುರ: ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಇಂದು ನಿಗದಿ ಮಾಡಲಾಗಿತ್ತು. ಚುನಾವಣಾ ಫಲಿತಾಂಶಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಂದ ತೀವ್ರ ಗುದ್ದಾಟ ನಡೆಸುತ್ತಿವೆ.
ಫಲಿತಾಂಶ ಹೊರ ಬಿಡಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದರೆ. ಇಂದೇ ಫಲಿತಾಂಶ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
ಈ ಹಿನ್ನೆಲೆ ದೊಡ್ಡಬಳ್ಳಾಪುರದ ದೊಡ್ಡತುಮಕೂರಿನ ವ್ಯವಸಾಯ ಸೇವಾ ಸಹಕಾರ ಸಂಘದ ಮುಂದೆ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ.
ಫಲಿತಾಂಶ ಪ್ರಕಟಿಸುವಂತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಪಟ್ಟು ಹಿಡಿದಿದ್ದಾರೆ.
ಸಂಘದ ಕಚೇರಿ ಮುಂದೆ ಕುಳಿತು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೋರ್ಟ ಆದೇಶದಂತೆ ತೀರ್ಪು ಪ್ರಕಟಿಸದ ಚುನಾವಣಾ ಅಧಿಕಾರಿಗಳು. 181 ಮತಗಳಿಗೆ ಎಣಿಕೆ ಮಾಡುವಂತೆ ಬಿಜೆಪಿ ಕಾರ್ಯಕರ್ತರ ಒತ್ತಾಯ ಮಾಡುತ್ತಿದ್ದಾರೆ.