ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ: ಚುನಾವಣಾ ಫಲಿತಾಂಶದಲ್ಲಿ ತೀವ್ರ ಗೊಂದಲ: ಸಂಘದ ಕಚೇರಿ ಮುಂದೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಜಮಾವಣೆ: ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

ದೊಡ್ಡಬಳ್ಳಾಪುರ: ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆ ಇಂದು ನಿಗದಿ ಮಾಡಲಾಗಿತ್ತು. ಚುನಾವಣಾ ಫಲಿತಾಂಶಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಂದ ತೀವ್ರ ಗುದ್ದಾಟ ನಡೆಸುತ್ತಿವೆ.

ಫಲಿತಾಂಶ ಹೊರ ಬಿಡಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದರೆ. ಇಂದೇ ಫಲಿತಾಂಶ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಈ ಹಿನ್ನೆಲೆ ದೊಡ್ಡಬಳ್ಳಾಪುರದ ದೊಡ್ಡತುಮಕೂರಿನ ವ್ಯವಸಾಯ ಸೇವಾ ಸಹಕಾರ ಸಂಘದ ಮುಂದೆ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು  ನಿಭಾಯಿಸಲು ಹರಸಾಹಸಪಡುತ್ತಿದ್ದಾರೆ.

ಫಲಿತಾಂಶ ಪ್ರಕಟಿಸುವಂತೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಪಟ್ಟು ಹಿಡಿದಿದ್ದಾರೆ.

ಸಂಘದ ಕಚೇರಿ ಮುಂದೆ ಕುಳಿತು ಕಾರ್ಯಕರ್ತರೊಂದಿಗೆ ಪ್ರತಿಭಟನೆ ‌ನಡೆಸುತ್ತಿದ್ದಾರೆ.

ಕೋರ್ಟ ಆದೇಶದಂತೆ ತೀರ್ಪು ಪ್ರಕಟಿಸದ ಚುನಾವಣಾ ಅಧಿಕಾರಿಗಳು. 181 ಮತಗಳಿಗೆ ಎಣಿಕೆ ಮಾಡುವಂತೆ ಬಿಜೆಪಿ ಕಾರ್ಯಕರ್ತರ ಒತ್ತಾಯ ಮಾಡುತ್ತಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

4 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

8 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

8 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

13 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago