
ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿಂದು(ಜು.10), ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ “ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ”ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ “ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ”ವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಉದ್ಘಾಟಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಆಗಮಿಸಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ”ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ “ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ” ಉದ್ಘಾಟನೆಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲೆ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಕಾರ್ಮಿಕ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ತಾಲೂಕು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದಾರೆ.