ಸರ್ಕಾರಿ ತಾಯಿ- ಮಗು ಆಸ್ಪತ್ರೆ, ಸಖಿ ಕೇಂದ್ರ, ಮಹಿಳಾ ಪೊಲೀಸ್ ಠಾಣೆ, ಕೊಡಿಗೇಹಳ್ಳಿ ಪ್ರಾಥಮಿಕ ಶಾಲೆ, ಗ್ರಾಮ ಪಂಚಾಯಿತಿ, ಶಾಂತಿನಗರ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಕ್ಕಳ ದಾಖಲಾತಿ ಅಪೌಷ್ಟಿಕತೆ ಸೇರಿದಂತೆ ಮಕ್ಕಳ ಬಗ್ಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಸಖಿ ಸೆಂಟರ್ ಗಳಲ್ಲಿ ಮಕ್ಕಳ ವಾರ್ಡಗಳಲ್ಲಿ ಎಸಿ ಸೇರಿದಂತೆ ಸೂಕ್ತ ವ್ಯವಸ್ಥೆ ಮಾಡಿಲ್ಲವೆಂದು ಸಿಬ್ಬಂದಿ ವಿರುದ್ಧ ಗರಂ ಆದರು.
ಮಹಿಳಾ ಪೊಲೀಸ್ ಠಾಣೆಯಲ್ಲಿ ಸಮರ್ಪಕ ರಿಜಿಸ್ಟರ್ ನಿರ್ವಹಣೆ ಮಾಡುತ್ತಿಲ್ಲ ಎಂದು ಪೊಲೀಸ್ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು.