ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರ (ಮಾ.06) ರಂದು ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ…

ಈ ವೇಳೆ ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು ಮಾಡಿದ್ದಾರೆ…

2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಿಗೆ ಮಂಜೂರಾಗಿರುವ ಹೊಸ ಯೋಜನೆಗಳು:

ದೇವನಹಳ್ಳಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಚಕ್ ಡ್ಯಾಂಗಳ ನಿರ್ಮಾಣ, ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆ ಅಭಿವೃದ್ಧಿ. ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿಯಲ್ಲಿ ವಿಜ್ಞಾನ ನಗರ ನಿರ್ಮಾಣಕ್ಕೆ ₹233 ಕೋಟಿ ವೆಚ್ಚದ ವರದಿ ಕೇಂದ್ರಕ್ಕೆ ಸಲ್ಲಿಕೆ.

ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಒಳಚರಂಡಿ ಅಭಿವೃದ್ದಿ. ದೊಡ್ಡಬಳ್ಳಾಪುರದಲ್ಲಿ ಪ್ಯಾರಮೆಡಿಕಲ್ ಕೋರ್ಸ್ ತರಗತಿಗಳ ಪ್ರಾರಂಭ. ದೊಡ್ಡಬಳ್ಳಾಪುರದಲ್ಲಿ ಸಂಚಾರಿ ಪೊಲೀಸ್ ಠಾಣೆ ಪ್ರಾರಂಭ.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ 2ನೇ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ 119 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಗೆ ₹650 ಕೋಟಿ ಮೀಸಲಿಡಲಾಗಿದೆ.

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಎಚ್.ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಗೆ ₹140 ಕೋಟಿ ಮೀಸಲಿಡಲಾಗಿದೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

30 minutes ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

15 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

20 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

23 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago