ದೊಡ್ಡಬಳ್ಳಾಪುರ:ಡಿಸೆಂಬರ್ 19 ರಂದು ಸಿರಿಧಾನ್ಯ ಪಾಕ ಸ್ಪರ್ಧೆ

ಕೃಷಿ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಡಿಸೆಂಬರ್ 19 ರಂದು ಮಧ್ಯಾಹ್ನ 12.00 ಗಂಟೆಗೆ ಸಿರಿಧಾನ್ಯ ಪಾಕ ಸ್ಪರ್ಧೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣ, ದೊಡ್ಡಬಳ್ಳಾಪುರ ಇಲ್ಲಿ ಆಯೋಜಿಸಲಾಗಿದೆ.

ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರೂ ಭಾಗವಹಿಸಬಹುದು ಸಿರಿಧಾನ್ಯ ಸಸ್ಯಾಹಾರಿ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ. ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು ಪ್ರದರ್ಶಿಸಲು ಅವಕಾಶವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ತಯಾರಿಸಿದ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳ ಪ್ರದರ್ಶನ ತೋರಿಕೆ (presentation/ appearance), ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಪ್ರತಿ ಸ್ಪರ್ಧಿ ಒಂದು ತಿನಿಸು (ಸಿಹಿ ಅಥವಾ ಖಾರ) ತಯಾರಿಸಲು ಮಾತ್ರ ಅವಕಾಶವಿದೆ. ಆಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ ಬೇಕಾಗುವ ಸಾಮಗ್ರಿಗಳು ಹಾಗೂ ತಯಾರಿಸುವ ವಿಧಾನ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 18 ರೊಳಗೆ ಸಂಬಂಧಪಟ್ಟ ತಾಲ್ಲೂಕಿನ ಇ-ಮೇಲ್ ಗೆ ಕಳುಹಿಸಬೇಕು.

ಇ-ಮೇಲ್ ವಿಳಾಸ adadevanahalli@gmail.com (ದೇವನಹಳ್ಳಿ), adaagridbp@yahoo.in (ದೊಡ್ಡಬಳ್ಳಾಪುರ), ada10hoskote@gmail.com (ಹೊಸಕೋಟೆ), adanelamangala@gmail.com (ನೆಲಮಂಗಲ). ಜಿಲ್ಲಾ ಮಟ್ಟದ ಪ್ರಥಮ ಸ್ಥಾನಕ್ಕೆ ಸಿಹಿ ತಿನಿಸು ಅಥವಾ ಖಾರ ತಿನಿಸುಗಳಿಗೆ ತಲಾ ರೂ.5000/- ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಡಿಸೆಂಬರ್ 23 ರಂದು ಬೆಂಗಳೂರಿನಲ್ಲಿ ಏರ್ಪಡಿಸುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಖಾದ್ಯವನ್ನು ತಯಾರಿಸಲು ಬೇಕಾಗುವ ಸಾಮಗ್ರಿಗಳನ್ನು ತಾವೇ ತೆಗೆದುಕೊಂಡು ನಿಗದಿತ ಸ್ಥಳ ಹಾಗೂ ಸಮಯದಲ್ಲಿ ಖುದ್ದಾಗಿ ಖಾದ್ಯವನ್ನು ಅಲ್ಲಿಯೇ ತಯಾರಿಸಲು ಬದ್ಧರಾಗಿರಬೇಕು.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮೊಬೈಲ್ ಸಂಖ್ಯೆ 8277929923 ಕ್ಕೆ ಸಂಪರ್ಕಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಲು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *