ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯಲ್ಲಿ ಸಹಸ್ರಾರು ಜನ ಪಾಲ್ಗೊಂಡು ಶ್ರೀರಾಮ ಜಪದಲ್ಲಿ ಮಿಂದೆದ್ದರು..

ಇಂದು ಭಾನುವಾರ ಅಂತಿಮ ದಿನದಂದು ಶ್ರೀರಾಮ, ಆಂಜನೇಯ, ಡಾ.ಬಿ.ಆರ್ ಅಂಬೇಡ್ಕರ್, ಇಮ್ಮಡಿ ಪುಲಕೇಶಿ, ಶಿವಾಜಿ, ಶಿವ ಮೂರ್ತಿಗಳನ್ನು ನಗರದ ಪ್ರಮುಖ ರಸ್ತೆ, ವೃತ್ತ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು..

ಶ್ರೀರಾಮ ಶೋಭಾಯಾತ್ರೆಯಲ್ಲಿ ಸಹಾಸ್ರಾರು ಜನ ಪಾಲ್ಗೊಂಡು ರಾಮ ನಾಮ ಸ್ಮರಿಸಿದರು.

ಇದೇ ಮೊದಲ ಬಾರಿಗೆ ವಿಶೇಷವಾಗಿ ನಗರದ ಹೃದಯ ಭಾಗ ಹಳೇ ಬಸ್ ನಿಲ್ದಾಣದಲ್ಲಿ ಶ್ರೀರಾಮ ಶೋಭಾಯಾತ್ರೆಯಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನಡೆಸಲಾಯಿತು. ಈ‌ ಸುಸಂದರ್ಭವನ್ನು ಜನ ಕಣ್ತುಂಬಿಕೊಂಡರು…

 

ಈ ವೇಳೆ ಶಾಸಕ ಧೀರಜ್ ಮುನಿರಾಜ್, ವಿಶ್ವ ಹಿಂದೂ ಪರಿಷತ್ ಬಜರಂಗ ದಳದ ಪ್ರಮುಖರು, ಆಯೋಜಕರು, ಹಿಂದೂ ಮುಖಂಡರು‌ ಸೇರಿದಂತೆ ಇತರರು ಉಪಸ್ಥಿತರಿದ್ದರು..

ಶ್ರೀರಾಮ ಶೋಭಾಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು…

Leave a Reply

Your email address will not be published. Required fields are marked *

error: Content is protected !!