ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯಲ್ಲಿ ಸಹಸ್ರಾರು ಜನ ಪಾಲ್ಗೊಂಡು ಶ್ರೀರಾಮ ಜಪದಲ್ಲಿ ಮಿಂದೆದ್ದರು..
ಇಂದು ಭಾನುವಾರ ಅಂತಿಮ ದಿನದಂದು ಶ್ರೀರಾಮ, ಆಂಜನೇಯ, ಡಾ.ಬಿ.ಆರ್ ಅಂಬೇಡ್ಕರ್, ಇಮ್ಮಡಿ ಪುಲಕೇಶಿ, ಶಿವಾಜಿ, ಶಿವ ಮೂರ್ತಿಗಳನ್ನು ನಗರದ ಪ್ರಮುಖ ರಸ್ತೆ, ವೃತ್ತ ಬೀದಿಗಳಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು..
ಶ್ರೀರಾಮ ಶೋಭಾಯಾತ್ರೆಯಲ್ಲಿ ಸಹಾಸ್ರಾರು ಜನ ಪಾಲ್ಗೊಂಡು ರಾಮ ನಾಮ ಸ್ಮರಿಸಿದರು.
ಇದೇ ಮೊದಲ ಬಾರಿಗೆ ವಿಶೇಷವಾಗಿ ನಗರದ ಹೃದಯ ಭಾಗ ಹಳೇ ಬಸ್ ನಿಲ್ದಾಣದಲ್ಲಿ ಶ್ರೀರಾಮ ಶೋಭಾಯಾತ್ರೆಯಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ನಡೆಸಲಾಯಿತು. ಈ ಸುಸಂದರ್ಭವನ್ನು ಜನ ಕಣ್ತುಂಬಿಕೊಂಡರು…
ಈ ವೇಳೆ ಶಾಸಕ ಧೀರಜ್ ಮುನಿರಾಜ್, ವಿಶ್ವ ಹಿಂದೂ ಪರಿಷತ್ ಬಜರಂಗ ದಳದ ಪ್ರಮುಖರು, ಆಯೋಜಕರು, ಹಿಂದೂ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು..
ಶ್ರೀರಾಮ ಶೋಭಾಯಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್…
ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…
ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ…