ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ದೊಡ್ಡಬಳ್ಳಾಪುರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಕೆಲಕಾಲ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭದಲ್ಲಿ ಭಾಗವಹಿಸಿ, ದೊಡ್ಡಬಳ್ಳಾಪುರದಲ್ಲಿರುವ ನನ್ನ ಸ್ನೇಹಿತರು, ಅಭಿಮಾನಿಗಳನ್ನು ಭೇಟಿಯಾಗಲು ಬಂದಿದ್ದೇನೆ. ದೊಡ್ಡಬಳ್ಳಾಪುರಕ್ಕೆ ಬಂದಿದ್ದು ತುಂಬಾ ಖುಷಿ ಕೊಟ್ಟಿದೆ. ಅಭಿಮಾನಿಗಳ ಪ್ರೀತಿಗೆ ಸಂತಸ ತಂದಿದೆ…ಎಂದು ತಿಳಿಸಿದರು.
ಯುಗ್ರಾಯುಧಮ್, ಪರಾಕ್ ಎರಡು ಸಿನಿಮಾಗಳು ನಡೆಯುತ್ತಿವೆ. ಪರಾಕ್ ಸಿನಿಮಾವನ್ನು ಹಾಲೇಶ್ ಕೋಗುಂಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ವಿಂಟೇಜ್ ಶೈಲಿಯ ಈ ಚಿತ್ರದ ಮುಹೂರ್ತ ಬೆಂಗಳೂರಿನಲ್ಲಿ ನಡೆದಿದೆ, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಯುಗ್ರಾಯುಧಮ್ ಚಿತ್ರವು 135 ಎಕರೆ ಜಾಗದಲ್ಲಿ ಸೆಟ್ ಹಾಕಿ ನಿರ್ಮಿಸುತ್ತಿರುವ ದೊಡ್ಡ ಬಜೆಟ್‌ನ ಪಿರಿಯಾಡಿಕ್ ಆ್ಯಕ್ಷನ್ ಚಿತ್ರವಾಗಿದೆ ಎಂದರು…
ಆದಷ್ಟು ಬೇಗ ಯುಗ್ರಾಯುಧಮ್, ಪರಾಕ್ ಎರಡು ಚಿತ್ರಗಳನ್ನು ರಿಲೀಸ್ ಮಾಡಬೇಕೆಂದು ಇದ್ದೇವೆ. ಇದಕ್ಕೆ ಎಲ್ಲರ ಆಶೀರ್ವಾದ ಬೇಕು ಎಂದು ಹೇಳಿದರು…
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…