ದೊಡ್ಡಬಳ್ಳಾಪುರ ನಗರದ ಬಯಲು ಬಸವಣ್ಣ ದೇವಾಲಯದ ಮುಂಭಾಗ ಜಂಗಿ(ಮಟ್ಟಿ) ಕುಸ್ತಿ ಕಾದಾಟ ಕಳೆಗಟ್ಟಿದ್ದು, ಪೈಲ್ವಾನ್ ಗಳ ಮೈನವಿರೇಳಿಸುವ ಕುಸ್ತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನ ಜಮಾಯಿಸಿದ್ದಾರೆ.
ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಲು ಹಾಗೂ ಇಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ.
ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಕುಸ್ತಿ ಕಲೆಯನ್ನು ಮುಂದಿನ ತಲೆಮಾರಿಗೆ ವರ್ಗಾಯಿಸಲು ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ.