ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ನಿರ್ಮಾಣಬೇಕು ಮತ್ತು ಕಾಮಗಾರಿ ಪೂರ್ಣವಾಗಿರುವ ಇಎಸ್ಐ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕೆಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸಲ್ಲಿಸಿ ಮಾತನಾಡಿದ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರೂ ಕಾಮಗಾರಿಗೆ ಅನುದಾನ ಬಿಡುಗಡೆಯಾಗದೆ ವಿಳಂಬವಾಗುತ್ತಿದೆ. ಸರ್ಕಾರ ಆಸ್ಪತ್ರೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸಬೇಕೆಂದು ಮನವಿಯನ್ನು ನೀಡಲಾಗಿದೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ಮನವಿ ಪತ್ರ ನೀಡಲಾಗಿದೆ. ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಗೆ 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ₹192ಕೋಟಿ ಅನುದಾನ ನಿಗದಿಪಡಿಸಿದೆ. ಆದರೆ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗದೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಇಎಸ್‍ಐ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಿ ನಾಲ್ಕು ವರ್ಷಗಳು ಕಳೆದಿರೂ ಉದ್ಘಾಟನೆ ಮಾತ್ರ ಆಗಿಲ್ಲ. 12 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ಅನುಕೂಲ ಆಗಲಿರುವ ಇಎಸ್ಐ ಆಸ್ಪತ್ರೆಯ ಸೇವಾ ಆರಂಭಕ್ಕೆ ಚಾಲನೆ ದೊರೆಯಬೇಕಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…