ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ನಿರ್ಮಾಣ ಮತ್ತು ಇಎಸ್ಐ ಆಸ್ಪತ್ರೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ  ನಿರ್ಮಾಣಬೇಕು ಮತ್ತು ಕಾಮಗಾರಿ ಪೂರ್ಣವಾಗಿರುವ ಇಎಸ್ಐ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕೆಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ‌ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ‌ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರೂ ಕಾಮಗಾರಿಗೆ ಅನುದಾನ ಬಿಡುಗಡೆಯಾಗದೆ ವಿಳಂಬವಾಗುತ್ತಿದೆ. ಸರ್ಕಾರ ಆಸ್ಪತ್ರೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸಬೇಕೆಂದು ಮನವಿಯನ್ನು ನೀಡಲಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ಮನವಿ ಪತ್ರ ನೀಡಲಾಗಿದೆ.‌ ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ.  ಜಿಲ್ಲಾ ಆಸ್ಪತ್ರೆಗೆ 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ₹192ಕೋಟಿ ಅನುದಾನ ನಿಗದಿಪಡಿಸಿದೆ. ಆದರೆ  ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗದೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ  ಇಎಸ್‍ಐ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಿ ನಾಲ್ಕು ವರ್ಷಗಳು ಕಳೆದಿರೂ ಉದ್ಘಾಟನೆ ಮಾತ್ರ ಆಗಿಲ್ಲ.  12 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ಅನುಕೂಲ ಆಗಲಿರುವ ಇಎಸ್ಐ ಆಸ್ಪತ್ರೆಯ ಸೇವಾ ಆರಂಭಕ್ಕೆ ಚಾಲನೆ ದೊರೆಯಬೇಕಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

11 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

15 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

18 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

20 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago