ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಪ್ರಾರಂಭಕ್ಕೆ ಕ್ರಮಕೈಗೊಳ್ಳಲು ಶಾಸಕ ಧೀರಜ್ ಮುನಿರಾಜ್ ಮನವಿ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ದೊಡ್ಡಬಳ್ಳಾಪುರದಲ್ಲಿ ಈ ಮೊದಲೇ ಅನುಮೋದನೆಗೊಂಡ ಜಿಲ್ಲಾಸ್ಪತ್ರೆಗೆ ಗುದ್ದಲಿಪೂಜೆ ಮಾಡಿ 2 ವರ್ಷವಾಗಿದೆ. ಈ ಬಾರಿಯಾದರೂ ಅನುದಾನ ನೀಡಿ ಜಿಲ್ಲಾಸ್ಪತ್ರೆ ಪ್ರಾರಂಭಿಸಲು ಕ್ರಮ ಕೈಗೊಳ್ಳಿ ಎಂದು ಸದನದಲ್ಲಿ ಮನವಿ ಮಾಡಿದ್ದಕ್ಕೆ ಸಚಿವರು ಸ್ಪಂದಿಸಿದ್ದು, ಶೀಘ್ರದಲ್ಲೇ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜ್ ತಿಳಿಸಿದ್ದಾರೆ…

ಸದನದಲ್ಲಿ ಚರ್ಚೆಯಾದ ವಿಷಯ

ಶಾಸಕ ಧೀರಜ್ ಮುನಿರಾಜ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಅನುದಾನ ಬಿಡುಗಡೆ ಮಾಡುವಂತೆ ಸತತವಾಗಿ 2023ರಿಂದ ಸರ್ಕಾರದ ಬಳಿ ಕೇಳುತ್ತಲೇ ಬಂದಿದ್ದೇವೆ.‌ ಸದ್ಯಕ್ಕೆ ಪೂರ್ಣ ಅನುದಾನ ಅಲ್ಲದಿದ್ದರೂ ಶೇ. 50ರಷ್ಟಾದರೂ ಅನುದಾನ ಕೊಟ್ಟು ಜಿಲ್ಲಾಸ್ಪತ್ರೆ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು..

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್: ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಮಾಡಲು ಶಾಸಕ ಧೀರಜ್ ಮುನಿರಾಜ್ ಅವರು ಸಾಕಷ್ಟು ಕೇಳುತ್ತಲೇ ಬಂದಿದ್ದಾರೆ… ಹಿಂದಿನ ಸರ್ಕಾರ ಇದ್ದಾಗ ಕೊನೆ ಘಟ್ಟದಲ್ಲಿ ಅನುಮೋದನೆ ನೀಡಿತ್ತು. ನಂತರ ನಮ್ಮ ಸರ್ಕಾರ ಬಂದಾಗ ಕಾಮಗಾರಿಗಳನ್ನು ತೆಗೆದುಕೊಳ್ಳಬೇಕಾ ಅಥವಾ ಬೇಡವಾ ಅಂತಾ ತಡೆಹಿಡಿಯಲಾಗಿತ್ತು. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಿಲ್ಲಾಸ್ಪತ್ರೆ ಜಿಲ್ಲೆಗೆ ಸಂಬಂಧಪಟ್ಟಿದ್ದು, ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ  ಆಗಬೇಕು ಎಂದು ಹೇಳಿದ್ದಾರೆ.. ಈಗಾಗಲೇ 20ಕೋಟಿ ವೆಚ್ಚದಲ್ಲಿ 50 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಕಾಮಗಾರಿ ಶುರುವಾಗಿದೆ… ಇನ್ನೂ ಅದಕ್ಕೆ ಪ್ರಥಮ ಹಂತದಲ್ಲಿ 100 ಹಾಸಿಗೆ ವ್ಯವಸ್ಥೆಗೆ ಅನುಮೋದನೆ ನೀಡಲಾಗುತ್ತದೆ. ಜಿಲ್ಲಾಸ್ಪತ್ರೆಗೆ 250 ಹಾಸಿಗೆ ವ್ಯವಸ್ಥೆ ಇರಬೇಕಾಗುತ್ತದೆ. ಬೇಡಿಕೆ ಅನುಸಾರವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು…

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

12 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

16 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

19 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 days ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago