ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ ಪ್ರಜೆಗಳನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಹಿತಿದಾರರಿಂದ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಪಾಸ್‌ಪೋರ್ಟ್ ಹಾಗೂ ವೀಸಾ ಸೇರಿದಂತೆ ಅಗತ್ಯ ದಾಖಲೆಗಳು ಇಲ್ಲದೆ ಭಾರತದಲ್ಲಿ ನೆಲೆಸಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಶಕ್ಕೆ ಪಡೆದವರನ್ನು ಮ್ಯಾಕ್ಸ್ವೆಲ್, ವ್ಯಾಕೋಬ್ ಹಾಗೂ ಮಾರ್ವೆಲಸ್ ಎಂದು ಗುರುತಿಸಲಾಗಿದೆ.
ಮೂವರು ನೈಜೀರಿಯಾ ಪ್ರಜೆಗಳನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲಾಗಿದ್ದು, ಅವರ ವಲಸೆ ಹಾಗೂ ವೀಸಾ ಸ್ಥಿತಿಗೆ ಅನುಗುಣವಾಗಿ ಕಾನೂನುಬದ್ಧ ಕ್ರಮ ಕೈಗೊಂಡು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…