ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.
ರಾಜಸ್ಥಾನ ಮೂಲದ ಉದ್ಯಮಿ ಅರವಿಂದ್ ಭಾರದ್ವಾಜ್ ಮತ್ತು ಜ್ಯೋತಿ ಕಾರಿನಲ್ಲಿ ಮಾತನಾಡುತ್ತಿದ್ದ ವೇಳೆ ಸ್ಥಳೀಯರ ಗುಂಪು ಪ್ರಶ್ನಿಸಿದ್ದು, ಬಳಿಕ ಇಬ್ಬರೂ ತಮ್ಮ ಕಂಪನಿಯತ್ತ ತೆರಳಿದ್ದಾರೆ. ಈ ವೇಳೆ ಕಾರು ಸ್ಥಳೀಯರ ಬೈಕ್‌ಗೆ ಸ್ಪರ್ಶಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ.
ಆ ಬಳಿಕ ಸ್ಥಳೀಯರ ಗುಂಪು ಕಂಪನಿವರೆಗೆ ಹಿಂಬಾಲಿಸಿ, ಕಾರಿನ ಮೇಲೆ ಸಿಮೆಂಟ್ ಇಟ್ಟಿಗೆ ಎಸೆದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಅರವಿಂದ್ ಬಾರದ್ವಾಜ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಹರ್ಷ, ಭರತ್, ಸಂದೀಪ್, ತಿಮ್ಮರಾಜ್, ಅಭಿ ಹಾಗೂ ಲತಿಫ್ ಸೇರಿ ಆರು ಜನರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…