ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಕೆಲವು ಪ್ರದೇಶಗಳಲ್ಲಿ ಶನಿವಾರ ವರ್ಷದ ಮೊದಲ ಮಳೆ ಸುರಿದಿದೆ.
ವರ್ಷದ ಮೊದಲ ಮಳೆ ಆಗಮನಕ್ಕೆ ತಾಲೂಕಿನ ಜನತೆ ಫುಲ್ ಖುಷ್ ಆಗಿದ್ದಾರೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆಯ ತಂಪು ಸಿಕ್ಕಂತಾಗಿದೆ.
ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಆರಂಭ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಇದರಿಂದ ರೈತರು ಖುಷ್ ಆಗಿದ್ದಾರೆ. ಮಾರ್ಚ್ ಕೊನೆಯ ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದ್ದು ಯುಗಾದಿ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ.