ಪ್ರಾಥಮಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವ ಸಲುವಾಗಿ ನಮ್ಮ ಕ್ಲಿನಿಕ್ ಗಳಿಗೆ ಬುಧವಾರ ಚಾಲನೆ ನೀಡಲಾಯಿತು. ನಗರದ ಹಳೆಯ ನಗರಸಭೆ ಕಟ್ಟಡ, ವಿದ್ಯಾನಗರ ಹಾಗೂ ಬಾಶೆಟ್ಟಿಹಳ್ಳಿಯಲ್ಲಿ ‘ನಮ್ಮ ಕ್ಲಿನಿಕ್‘ಗಳನ್ನು ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಆರ್.ಲತಾ ಉದ್ಘಾಟಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ನೀಡಬೇಕು. ನಗರ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರನ್ನು ಗುರಿಯಾಗಿಸಿಕೊಂಡು ನಮ್ಮ ಕ್ಲಿನಿಕ್ ಸ್ಥಾಪಿಸಲಾಗಿದೆ. ಒಂದೇ ದಿನ ರಾಜ್ಯಾದ್ಯಂತ 114 ಕ್ಲಿನಿಕ್ ಗಳು ಉದ್ಘಾಟನೆಗೊಂಡಿವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲೆಯಲ್ಲಿ ಇಂದು ಒಟ್ಟು ಆರು ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಹೊಸಕೋಟೆ ,ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ತಲಾ ಒಂದರಂತೆ ಇನ್ನೂ ಮೂರು ಕ್ಲಿನಿಕ್ ಪ್ರಾರಂಭವಾಗಲಿವೆ ಎಂದರು. ಒಂದೇ ಸೂರಿನಡಿ 12 ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಿರುವ ನಮ್ಮ ಕ್ಲಿನಿಕ್ ಗಳು ಇಡೀ ದೇಶದಲ್ಲೇ ವಿನೂತನ ಯೋಜನೆಯಾಗಿದೆ ಎಂದು ಹೇಳಿದರು.
ಶಾಸಕ ವೆಂಕಟರಮಣಯ್ಯ ಮಾತನಾಡಿ ಜನರ ಆರೋಗ್ಯ ದೃಷ್ಠಿಯಿಂದ ಕ್ಲಿನಿಕ್‌ಗಳನ್ನು ತೆರೆದಿರುವುದು ಸಂತೋಷದ ಸಂಗತಿ, ಆದರೆ ಪ್ರತಿ ಕ್ಲಿನಿಕ್‌ಗಳಲ್ಲಿ ಕಡ್ಡಾಯವಾಗಿ ನುರಿತ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ಮತ್ತು ಸಲಕರಣೆಗಳು ಇರುವಂತೆ ನೋಡಿಕೊಳ್ಳಬೇಕಿದೆ ಎಂದರು.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಸ್ಥಾಯಿ ಸಮಿತಿ ಅಧ್ಯಕ್ಷೆ ಆದಿಲಕ್ಷ್ಮಿ, ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ್, ನಗರಸಭೆ ಪೌರಾಯುಕ್ತ ಶಿವಶಂಕರ್, ನಗರಸಭೆ ಸದಸ್ಯರು ಸೇರಿ ಆರೋಗ್ಯ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…