ದೊಡ್ಡಬಳ್ಳಾಪುರದಲ್ಲಿ ಹೆಚ್ಚಾದ ಬೈಕ್ ಕಳ್ಳತನ: ಬೈಕ್ ಪಾರ್ಕ್ ಮಾಡುವ ಮುನ್ನ ಇರಲಿ ಎಚ್ಚರ….!

ಇತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ ಬೈಕ್ ಕಳ್ಳತನ‌ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಬೈಕ್ ಕಳೆದುಕೊಂಡವರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ.

ಬೈಕ್ ಪಾರ್ಕ್ ಮಾಡಿ ಸ್ವಲ್ಪ‌ ಯಾಮಾರಿದರೆ ಸಾಕು ಪಾರ್ಕ್ ಮಾಡಿದ್ದ ಬೈಕ್ ಕ್ಷಣಾರ್ಧದಲ್ಲಿ ನಾಪತ್ತೆ ಆಗುತ್ತದೆ. ಇತ್ತೀಚೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಎರಡು ಬೈಕ್ ಗಳು ಕಳ್ಳರ ಪಾಲಾಗಿವೆ.

ಸೆ.11ರ ರಾತ್ರಿ ಖಾಸಗಿ ಬಿಲ್ಡಿಂಗ್ ನ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಲಾಗಿತ್ತು, ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಅ.4ರಂದು ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಬಳಿ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಆಸ್ಪತ್ರೆಯ ಒಳಗೆ ಹೋಗಿ ಒಂದು ತಾಸು ಬಿಟ್ಟು ಮತ್ತೆ ಆಸ್ಪತ್ರೆಯಿಂದ ಹೊರ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ದಿನದಿಂದ ದಿನಕ್ಕೆ ಬೈಕ್ ಕಳವು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ತಮ್ಮ ದೈನಂದಿನ ಕೆಲಸಕ್ಕೆ ಅನಕೂಲವಾಗಲಿ ಎಂದು ಬೈಕ್​ಗಳನ್ನು ಖರೀದಿಸಿದರೆ, ಕಳ್ಳರು, ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಪೊಲೀಸರು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಕಳ್ಳರನ್ನು ಪತ್ತೆ ಮಾಡುವ ಕೆಲಸ ಮಾಡಬೇಕಿದೆ. ಆ ಮೂಲಕ ಸಾರ್ವಜನಿಕರ ನೆಮ್ಮದಿ ಹಾಳಾಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

2 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

6 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

14 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

16 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

19 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

21 hours ago