ಇತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಬೈಕ್ ಕಳೆದುಕೊಂಡವರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ.
ಬೈಕ್ ಪಾರ್ಕ್ ಮಾಡಿ ಸ್ವಲ್ಪ ಯಾಮಾರಿದರೆ ಸಾಕು ಪಾರ್ಕ್ ಮಾಡಿದ್ದ ಬೈಕ್ ಕ್ಷಣಾರ್ಧದಲ್ಲಿ ನಾಪತ್ತೆ ಆಗುತ್ತದೆ. ಇತ್ತೀಚೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಎರಡು ಬೈಕ್ ಗಳು ಕಳ್ಳರ ಪಾಲಾಗಿವೆ.
ಸೆ.11ರ ರಾತ್ರಿ ಖಾಸಗಿ ಬಿಲ್ಡಿಂಗ್ ನ ಕಾಂಪೌಂಡ್ ಒಳಗೆ ಬೈಕ್ ನಿಲ್ಲಿಸಲಾಗಿತ್ತು, ಬೆಳಗ್ಗೆ ಎದ್ದು ನೋಡಿದಾಗ ಬೈಕ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಅ.4ರಂದು ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಬಳಿ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಆಸ್ಪತ್ರೆಯ ಒಳಗೆ ಹೋಗಿ ಒಂದು ತಾಸು ಬಿಟ್ಟು ಮತ್ತೆ ಆಸ್ಪತ್ರೆಯಿಂದ ಹೊರ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿದೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಹುಡುಕಾಟದಲ್ಲಿ ನಿರತರಾಗಿದ್ದಾರೆ.
ದಿನದಿಂದ ದಿನಕ್ಕೆ ಬೈಕ್ ಕಳವು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ತಮ್ಮ ದೈನಂದಿನ ಕೆಲಸಕ್ಕೆ ಅನಕೂಲವಾಗಲಿ ಎಂದು ಬೈಕ್ಗಳನ್ನು ಖರೀದಿಸಿದರೆ, ಕಳ್ಳರು, ಅವುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಪೊಲೀಸರು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಕಳ್ಳರನ್ನು ಪತ್ತೆ ಮಾಡುವ ಕೆಲಸ ಮಾಡಬೇಕಿದೆ. ಆ ಮೂಲಕ ಸಾರ್ವಜನಿಕರ ನೆಮ್ಮದಿ ಹಾಳಾಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…