ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಮೀನುಗಾರರ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ್ ಸುಣಗಾರ್ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ನಗರದಲ್ಲಿ ಶೀಘ್ರದಲ್ಲೇ ಹೈಟೆಕ್ ಮೀನುಗಾರರ ಮಾರುಕಟ್ಟೆ ಆರಂಭಿಸಲು ತೀರ್ಮಾನಿಸಲಾಗಿದ್ದು, ಜೊತೆಗೆ ಮೀನು ಹೋಟೆಲ್ ತೆರೆಯುವ ಯೋಜನೆಯೂ ರೂಪಿಸಲಾಗಿದೆ ಎಂದು ಹೇಳಿದರು.
ಮಳೆ ಕೊರತೆಯಿಂದಾಗಿ ಮೀನುಗಾರರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದು, ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ಮೀನುಗಾರರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೈಗಾರಿಕೆಗಳಿಂದ ಹೊರಬರುವ ರಾಸಾಯನಿಕಯುಕ್ತ ನೀರು ಕೆರೆಗಳಿಗೆ ಸೇರಿ ನೀರು ಕಲುಷಿತವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರಿಂದ ಮೀನುಗಳು ಸಾವನ್ನಪ್ಪುತ್ತಿರುವ ಘಟನೆಗಳು ವರದಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಘಾಟಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ. ಮಹೇಶ್ ಕುಮಾರ್, ಮೀನುಗಾರರ ಸಮಸ್ಯೆಗಳ ಪರಿಹಾರಕ್ಕಾಗಿ ಮಂಜುನಾಥ್ ಸುಣಗಾರ್ ಅವರು ನಿರಂತರವಾಗಿ ಶ್ರಮಿಸುತ್ತಿದ್ದು, ಸರ್ಕಾರದ ವಿವಿಧ ಸೌಲಭ್ಯಗಳನ್ನು ಮೀನುಗಾರರಿಗೆ ನೇರವಾಗಿ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ಸರ್ಕಾರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ನಗರಸಭಾ ಸದಸ್ಯ ಕಾಂತರಾಜ್ ಸೇರಿದಂತೆ ಮೀನುಗಾರರ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…