ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, 4 ಲಕ್ಷ ಮೌಲ್ಯದ 3.4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಬಿಹಾರ ಮೂಲದ 23 ವರ್ಷದ ಸೋನು ಕುಮಾರ್ ಝಾ ಎಂದು ಗುರುತಿಸಲಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ವಿ. ಚಂದ್ರಕಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ವೆಂಕಟೇಶ್ ಪ್ರಸನ್ನ ಹಾಗೂ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…