ದೊಡ್ಡಬಳ್ಳಾಪುರದಲ್ಲಿ 6 ಕೆಜಿ 126 ಗ್ರಾಂ ಅಕ್ರಮ ಒಣ ಗಾಂಜಾ ವಶ: ಉತ್ತರ ಪ್ರದೇಶ ಮೂಲದ ಯುವಕ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಮುಷರಪ್ ಅಲಿ (23) ಎಂದು ಗುರುತಿಸಲಾಗಿದ್ದು, ಆತ ಉತ್ತರ ಪ್ರದೇಶದ ಮುರಾದಾಬಾದ್ ಮೂಲದವನಾಗಿದ್ದಾನೆ. ಪ್ರಸ್ತುತ ದೊಡ್ಡಬಳ್ಳಾಪುರ ನಗರದ ಅರ್ಕಾವತಿ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.

ಆರೋಪಿ ಉತ್ತರ ಪ್ರದೇಶದಿಂದ ದೊಡ್ಡಬಳ್ಳಾಪುರಕ್ಕೆ ಒಣ ಗಾಂಜಾವನ್ನು ತಂದು ಮಾರಾಟ ಮಾಡುವ ಉದ್ದೇಶದಿಂದ ತನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.

ಡಿವೈಎಸ್‌ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ, ನಗರ ಪೊಲೀಸ್ ಠಾಣೆಯ ಪ್ರಭಾರ ಇನ್ಸ್‌ಪೆಕ್ಟರ್ ಮುತ್ತುರಾಜ್ ನೇತೃತ್ವದಲ್ಲಿ ಸಿಬ್ಬಂದಿ ಪಾಂಡುರಂಗ, ಹುಸೇನ್, ಶಿವಾನಂದ, ಮುನಿರಾಜು, ಪ್ರದೀಪ್ ಹಾಗೂ ರೂಪೇಶ್ ಅವರ ತಂಡ ಕಾರ್ಯಾಚರಣೆ ನಡೆಸಿತು.

ದಾಳಿಯ ವೇಳೆ ಆರೋಪಿಯ ವಶದಲ್ಲಿದ್ದ 6 ಕೆಜಿ 126 ಗ್ರಾಂ ಅಕ್ರಮ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

20 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

21 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago