ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರದಲ್ಲಿರುವ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಇಂದು (ಸೆ.16) ಬೆಳಗ್ಗೆ-10:00 ಗಂಟೆಗೆ ಏರ್ಪಡಿಸಲಾಗಿತ್ತು.
ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್ ಅವರು ಉದ್ಘಾಟಿಸಿದರು.
*ಕ್ರೀಡಾ ಸ್ಪರ್ಧೆಗಳು*
ಮ್ಯೂಸಿಕಲ್ ಚೇರ್ (60 ರಿಂದ 69 ವರ್ಷ), ಬಿರುಸಿನ ನಡಿಗೆ (60 ರಿಂದ 70 ವರ್ಷ ಹಾಗೂ ಮೇಲ್ಪಟ್ಟವರು). ಬಕೆಟ್ ಗೆ ಬಾಲ್ ಎಸೆಯುವುದು(60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)
*ಸಾಂಸ್ಕೃತಿಕ ಸ್ಪರ್ಧೆಗಳು*
ಗಾಯನ ಸ್ಪರ್ದೆ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)
ಏಕ ಪಾತ್ರಾಭಿನಯ (60 ರಿಂದ 69 ವರ್ಷ 70 ವರ್ಷ ಹಾಗೂ ಮೇಲ್ಪಟ್ಟವರು)
ಸ್ಪರ್ಧೆಗೆ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಿಸಿದ್ದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ, ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿ ವಿನೋದ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಸತೀಶ್ ಪಾಣಿ, ನಿವೃತ್ತ ನೌಕರರ ಜಿಲ್ಲಾ ಸಂಘದ ಮಹಾಲಿಂಗಯ್ಯ, ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಅಮಲಿ ನಾಯಕ್, ಗ್ರಾಮೀಣ ನಗರ ಹಾಗೂ ವಿರೋದ್ದೇಶ ಪುನರ್ವಸತಿ ಕಾರ್ಯಕರ್ತರು, ಜಿಲ್ಲಾ ಸಂಘ ಸಂಸ್ಥೆಗಳ ಸಿಬ್ಬಂದಿ ಹಿರಿಯ ನಾಗರಿಕರು ಕಚೇರಿಯ ಸಿಬ್ಬಂದಿ, ನರಸಿಂಹಮೂರ್ತಿ, ರವಿಕುಮಾರ್, ಕೇಶವ, ಪ್ರಸನ್ನ ಉಪಸ್ಥಿತರಿದ್ದರು..
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…