ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್ ಬಗ್ಗೆ ಅರಿವು ಮತ್ತು ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಟಿಬಿ ಸರ್ಕಲ್) ಮುಂಭಾಗ ಹಮ್ಮಿಕೊಳ್ಳಲಾಗಿತ್ತು….

ಈ ವೇಳೆ ಪೊಲೀಸರು ಹೆಲ್ಮೆಟ್ ಧರಿಸಿ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬೈಕ್ ನಲ್ಲಿ ಸಂಚರಿಸಿ ಜನರಿಗೆ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಿದರು…

ಹೆಲ್ಮೆಟ್ ಅರಿವು ಕಾರ್ಯಕ್ರಮಕ್ಕೆ ಡಿವೈಎಸ್ ಪಿ ಪಾಂಡುರಂಗ ಚಾಲನೆ ನೀಡಿದರು….

ಹೆಲ್ಮೆಟ್ ಇಲ್ಲದ ಬೈಕ್ ಚಾಲನೆ ಮಾಡುತ್ತಿದ್ದವರಿಗೆ ಹೆಲ್ಮೆಟ್ ವಿತರಸಿ, ಇನ್ನು ಮುಂದೆ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡಿದರೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು…

ಅದರಂತೆ ಹಿಂಬದಿ ಕುಳಿತುಕೊಳ್ಳುವ ಮಕ್ಕಳಿಗೂ ಹೆಲ್ಮೆಟ್ ವಿತರಣೆ ಮಾಡಲಾಯಿತು..

ಈ ವೇಳೆ ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು….

Leave a Reply

Your email address will not be published. Required fields are marked *

error: Content is protected !!