ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಶ್ರೀನಿವಾಸ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶ್ರೀನಿವಾಸ್ ರನ್ನು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ಉಪ ಪ್ರಧಾನ ವ್ಯವಸ್ಥಾಪಕರಾಗಿ ನೇಮಿಸಿದೆ.
ಇನ್ನು ದಾವಣಗೆರೆ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದುರ್ಗಶ್ರೀ.ಎನ್ ಅವರನ್ನು ದೊಡ್ಡಬಳ್ಳಾಪುರ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಸರಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಉಮಾದೇವಿ ವರ್ಗಾವಣೆ ಆದೇಶ ಹೊರಡಿಸಿದ್ದಾರೆ.