ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿದೆ.
ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.