ದೊಡ್ಡಬಳ್ಳಾಪುರ ಉಪವಿಭಾಗ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ವಿವಿಧ ಪ್ರಕರಣಗಳಲ್ಲಿ 30 ಮಂದಿ ಬಂಧನ: 1ಕೋಟಿಗೂ ಅಧಿಕ ಬೆಲೆ ಬಾಳುವ ಮಾಲು ವಶ

ದೊಡ್ಡಬಳ್ಳಾಪುರ ಉಪವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳವು ಪ್ರಕರಣಗಳು, ಸರಗಳ್ಳತನ ಪ್ರಕರಣಗಳು, ಎನ್.ಡಿ.ಪಿ.ಎಸ್‌, ಸ್ವತ್ತು ಅಪರಾಧ ಸೇರಿದಂತೆ ಒಟ್ಟು 56 ಪ್ರಕರಣಗಳನ್ನ ಬೇಧಿಸಿ, 30ಮಂದಿ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ ಸುಮಾರು 1ಕೋಟಿಗೂ ಅಧಿಕ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿರುವ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾಹಿತಿ‌ ನೀಡಿದ್ದಾರೆ.

ಹಲವು ಕ್ಲಿಷ್ಟ ಪ್ರಕರಣಗಳನ್ನು ಬೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡುವುದರ ಮೂಲಕ ಮತ್ತಷ್ಟು ಉತ್ತಮ ಕಾರ್ಯ ಮಾಡಲು ಅಭಿನಂದಿಸಿದ್ದಾರೆ.

ಜೊತೆಗೆ ವಸ್ತುಗಳನ್ನು ಕಳೆದುಕೊಡ ಮಾಲೀಕರಿಗೆ ಅವರ ವಸ್ತುಗಳನ್ನು ಹಸ್ತಾಂತರ ಮಾಡಲಾಯಿತು.

ಈ ವೇಳೆ ಎಎಸ್ಪಿ ಪುರುಷೋತ್ತಮ, ಡಿವೈಎಸ್ಪಿ ರವಿ.ಪಿ, ದೊಡ್ಡಬಳ್ಳಾಪುರ ಉಪವಿಭಾಗದ ವೃತ್ತ ನಿರೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Share
Published by
Ramesh Babu

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

13 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

14 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

17 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

1 day ago