ದೊಡ್ಡಬಳ್ಳಾಪುರ ಎಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಪರಿಶೀಲನೆ

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಬೆಂಗಳೂರು ಉತ್ತರ-ದಕ್ಷಿಣ ಮತ್ತು ದೊಡ್ಡಬಳ್ಳಾಪುರ ವ್ಯಾಪ್ತಿಯ ಉಪ-ವಿಭಾಗಾಧಿಕಾರಿ (ಎಸಿ) ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಅಧಿಕಾರಿಗಳ ಜೊತೆ ಇಂದು ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ದೊಡ್ಡಬಳ್ಳಾಪುರ ಉಪ-ವಿಭಾಗಾಧಿಕಾರಿ (ಎಸಿ) ದುರ್ಗಾಶ್ರೀ ಅವರು ಭಾಗವಹಿಸಿ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸಚಿವರ ಗಮನಕ್ಕೆ ತಂದರು.

ಈ ವೇಳೆ ಕಂದಾಯ ಇಲಾಖಾ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು….

Leave a Reply

Your email address will not be published. Required fields are marked *

error: Content is protected !!