ದೊಡ್ಡಬಳ್ಳಾಪುರ: ಸಂಘಟನೆಗಳು ಜನಸ್ನೇಹಿಯಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿಶಿಷ್ಟವಾಗಿ ಕಾರ್ಯನಿರ್ವಹಿಸುವ ಅವಕಾಶ ಇದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಹೇಳಿದರು.
ನಗರದಲ್ಲಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಡೆದ ದಿನಪತ್ರಿಕೆ ಹಂಚುವ ಮಕ್ಕಳಿಗೆ ಪುಸ್ತಕ, ಲೇಖನ ಪರಿಕರಗಳ ವಿತರಣೆ ಹಾಗೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಮ್ಮ ಸಂಸ್ಥೆಯ ಮೂಲಕ ನಿತ್ಯ ದಾಸೋಹ ಸೇವೆ ನಿರಂತರವಾಗಿ ನಡೆಯುತ್ತಿದ್ದು, ಹಲವು ದಾನಿಗಳು ಇದಕ್ಕೆ ಕೈಜೋಡಿಸಿದ್ದಾರೆ. ದಿನಪತ್ರಿಕೆ ಹಂಚುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ನೋಟ್ ಪುಸ್ತಕ ಹಾಗೂ ಲೇಖನ ಪರಿಕರಗಳನ್ನು ವಿತರಿಸಲಾಗುತ್ತಿದೆ. ನಿತ್ಯದ ಸುದ್ದಿಗಳನ್ನು ಜನತೆಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಎಷ್ಟು ಗಣನೀಯವೋ ಅದೇ ರೀತಿಯಲ್ಲಿ ಸುದ್ದಿಪತ್ರಿಕೆ ಹಂಚುವ ವಿತರಕರು ಹಾಗೂ ಮನೆಮನೆಗೆ ತಲುಪಿಸುವ ಮಕ್ಕಳ ಕೊಡುಗೆಯೂ ಅಪಾರ ಎಂದರು.
ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ಕೆ.ಆರ್ ಮಾತನಾಡಿ, ಕನ್ನಡ ಸಂಘಟನೆಗಳು ವಿಭಿನ್ನವಾಗಿ ತನ್ನ ಆಶಯಗಳ ಸಾಕಾರಕ್ಕೆ ಶ್ರಮಿಸುವ ಅವಕಾಶಗಳಿದ್ದು, ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವುದು ಅಗತ್ಯ. ಪತ್ರಿಕೆ ಹಂಚುವ ಮಕ್ಕಳ ಶೈಕ್ಷಣಿಕ ಮುನ್ನಡೆಗೆ ಪ್ರೋತ್ಸಾಹದಾಯಕವಾಗಿ ಪುಸ್ತಕಗಳ ವಿತರಣೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ. ಸಾಮಾಜಿಕ ಪ್ರಗತಿಗೆ ಶೈಕ್ಷಣಿಕ ಸಬಲೀಕರಣವೇ ಪ್ರಧಾನ. ವಿದ್ಯಾವಂತ ಸಮಾಜ ನಿರ್ಮಾಣಕ್ಕೆ ಸಂಘಟನೆಗಳು ಈ ರೀತಿಯ ಕಾರ್ಯಕ್ರಮಗಳ ಮೂಲಕ ಶ್ರಮಿಸುತ್ತಿರುವುದು ಗಣನೀಯ ಎಂದರು.
ಕಾರ್ಯಕ್ರಮವನ್ನು ತಾಲೂಕು ವೈದ್ಯಾಧಿಕಾರಿ ಡಾ.ಶಾರದಾ ನಾಗಾನಾಥ್ ಉದ್ಘಾಟಿಸಿದರು. ಇದೇ ವೇಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್, ಮೆಳೇಕೋಟೆಯ ವೈದ್ಯಾಧಿಕಾರಿ ಡಾ.ಅರುಣ್ ಕುಮಾರ್, ಮಕ್ಕಳ ತಜ್ಞ ಡಾ.ಸುಭಾಶ್ ಶಿಂಪಿಗೇರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ್.ಡಿ. ಉಪ್ಪಾರ್, ಶಿಕ್ಷಕಿ ಜಿ.ರೂಪಶ್ರೀ, ಕುಸ್ತಿ ತರಬೇತುದಾರ ಪೈಲ್ವಾನ್ ಚೌಡಪ್ಪ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಜುನಾಥ್ ಸುಗಟೂರು, ಬಾಲೆಪುರ ಮಂಜಣ್ಣ, ಜಗದೀಶ್ ಬೂದಿಹಾಳ, ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ಸಂಘಟನಾ ಕಾರ್ಯದರ್ಶಿ ಅರವಿಂದ್, ಚೇತನ್‌ಗೌಡ, ಸುಭಾಷ್‌ಚಂದ್ರ, ದೊಡ್ಡೇಗೌಡ, ಅಲ್ತಾಫ್, ರಂಜಿತ್, ನರೇಂದ್ರ, ಸುರೇಶ್ ದಾವಣಗೆರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…