ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡಿ ಪಕ್ಷವನ್ನು ಬಲಪಡಿಸಬೇಕು. ಅದಕ್ಕೆ ನಮ್ಮ ಸಹಕಾರವಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಚಂದ್ರೇ ಗೌಡ ಹೇಳಿದರು..
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರ ನೇಮಕ ಸಭೆಯಲ್ಲಿ ನರಸಿಂಹ ಮೂರ್ತಿ ಅವರಿಗೆ ನೇಮಕ ಪತ್ರ ನೀಡಿ ಅವರು ಮಾತನಾಡಿದರು.
ನಂತರ ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ನರಸಿಂಹ ಮೂರ್ತಿ ಅವರನ್ನು ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿತ್ತು, ಅದರಂತೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಚಂದ್ರೇ ಗೌಡ ಅವರು ನರಸಿಂಹ ಮೂರ್ತಿ ಅವರಿಗೆ ಆದೇಶ ಪತ್ರ ನೀಡಿ ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದರು..
ಈ ವೇಳೆ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹರಿಶ್ ಚಕ್ರವರ್ತಿ, ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾ ಮೂರ್ತಿ, ರಂಗಸ್ವಾಮಿ, ಕರಾಟೆ ಶ್ರೀನಿವಾಸ್, ಮಂಜುನಾಥ್, ಕೆಎಸ್ ನರಸಿಂಹಮೂರ್ತಿ, ವೀರೇಶ್, ರಮೇಶ್ ಸೇರಿದಂತೆ ಇತರರು ಇದ್ದರು..
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…