ದೊಡ್ಡಬಳ್ಳಾಪುರ: ನಾಗಸಂದ್ರ ಸಮೀಪದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ.
ಮೃತರನ್ನು ಮುನಿರಾಜು (40) ಮತ್ತು ರೇಣುಕಾ (35) ಎಂದು ಗುರುತಿಸಲಾಗಿದೆ. ದಂಪತಿ ದೇವನಹಳ್ಳಿಯಲ್ಲಿ ವಾಸವಾಗಿದ್ದರು. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಂಟೆ ಸಮೀಪದ ಅಂಬಲಗೆರೆ ಗ್ರಾಮದ ರೇಣುಕಾ ಅವರ ತವರು ಮನೆಗೆ ತೆರಳಿ, ಅಲ್ಲಿಂದ ದಂಪತಿ ದ್ವಿಚಕ್ರ ವಾಹನದಲ್ಲಿ ದೇವನಹಳ್ಳಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಅ.23ರಂದು ಸಂಜೆ ಸುಮಾರು 6.30ರ ವೇಳೆಗೆ ನಾಗಸಂದ್ರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇವರ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ರೇಣುಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮುನಿರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮೃತ ದಂಪತಿಗೆ ಇಬ್ಬರು ಮಕ್ಕಳಿದ್ದು, ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮದುವೆ ವೆಚ್ಚದ ಹೊರೆಯನ್ನು ತಗ್ಗಿಸಿ, ಆರ್ಥಿಕವಾಗಿ ಹಿಂದುಳಿದ ವಧು-ವರರಿಗೆ ಆಸರೆಯಾಗಿದ್ದ ರಾಜ್ಯ ಸರ್ಕಾರದ…
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ನಡೆಸಿ, ಥಾಯ್ಲೆಂಡ್, ಬ್ಯಾಂಕಾಕ್‌ನಿಂದ…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದಿದ್ದು, ಶೇಕಡ…
ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದು, ಅವರ ಪರವಾಗಿ ಎನ್‌ಡಿಎ ನಾಯಕರು, ಮುಖಂಡರು…
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಕಾರ್ಯವು ಜಿಲ್ಲೆಯ 06 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು ಅಪರಾಹ್ನ 12 ಗಂಟೆಯವರೆಗೆ ಶೇ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಘುಮೇನಹಳ್ಳಿ ಸೇರಿದಂತೆ ತೂಬಗೆರೆ ಸುತ್ತಮುತ್ತಲಿನ ಕೆಲ ಪ್ರದೇಶದಲ್ಲಿ ಶುಕ್ರವಾರ (ಅ.23) ಬೆಳಿಗ್ಗೆ ಸುಮಾರು…