ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಪ್ರಯಾಣಿಕರಿಂದ ಮನವಿ: ಚಿಕ್ಕಬಳ್ಳಾಪುರ ವಿಭಾಗದಿಂದ ದೊಡ್ಡಬಳ್ಳಾಪುರ ಬಸ್ ಘಟಕ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಮನವಿ: ಒಂದು ವಾರದ ಒಳಗಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ

ತಾಲೂಕಿನಲ್ಲಿ ಹಲವು ತಿಂಗಳುಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಇಂದು ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಇಂದು ಕೋರಮಂಗಲದ ಬಿಬಿಎಂಪಿ ಕಚೇರಿಯಲ್ಲಿ ರಾಮಲಿಂಗಾ ರೆಡ್ಡಿ ಅವರನ್ನು ಪ್ರಯಾಣಿಕರಾದ ವಿನೋದ್ ಕುಮಾರ್, ಮಂಜುನಾಥ್, ಚಂದ್ರ ಮಂಚನಬೆಲೆ, ಸಚಿನ್, ಮಂಜು ಆರ್ ಅವರು ಭೇಟಿಯಾಗಿ, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ಕುರಿತು ವಿವರಿಸಿದರು.

ದೊಡ್ಡಬಳ್ಳಾಪುರವು ಬೆಂಗಳೂರು ನಗರದಿಂದ ಸುಮಾರು 38 ಕಿ.ಮೀ. ಗಳ ದೂರದಲ್ಲಿದ್ದು, ದೊಡ್ಡಬಳ್ಳಾಪುರದ ನಾಗರಿಕರು ಬೆಂಗಳೂರಿಗೆ ಬಂದು ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆ‌ ಇಲ್ಲದೆ ಪರದಾಡುವ ಪರಿಸ್ಥಿತಿ ತುಂಬಾ ವರ್ಷಗಳಿಂದಲೂ ಇದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ವಿವರಿಸಿದರು.

ಯಾವುದೇ ಸರ್ಕಾರ ಮತ್ತು ಶಾಸಕರು ಬಂದರೂ ಸಹ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ನಾವು ತಮ್ಮ ಮೇಲಿನ ನಂಬಿಕೆ ಹಾಗೂ ವಿಶ್ವಾಸದಿಂದ ಮನವಿಯನ್ನು ಸಲ್ಲಿಸುತ್ತಿದ್ದೇವೆ.

ಈ ಮೊದಲು ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ ಮತ್ತು ಇತರೆ ಕೆಲವು ಜಿಲ್ಲೆಗಳಿಗೆ ಹೋಗುತ್ತಿದ್ದ ಬಸ್ಸುಗಳನ್ನು ಈ ಹಿಂದೆ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್ ರದ್ದು ಮಾಡಿರುತ್ತಾರೆ. ಹಾಗೂ ಈ ಹಿಂದೆ ಕಾವೇರಿ ಭವನ, ಬೆಂಗಳೂರು, ದೊಡ್ಡಬಳ್ಳಾಪುರ ನಡುವೆ ಸಂಚರಿಸಲು ಸುಮಾರು 15-20ರಷ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ವ್ಯವಸ್ಥೆ ಕಲ್ಪಿಸಿದ್ದರು. ಆದರೆ ಇದೀಗ ಅವುಗಳ ಸಂಖ್ಯೆ ಕೇವಲ 3-4ಕ್ಕೆ ಇಳಿದಿವೆ.

ಪ್ರತಿ ದಿನ ಸಾವಿರಾರು ಜನರು ಬೆಂಗಳೂರಿಗೆ ಬಂದು ಹೋಗುವವರಿದ್ದು, ಅವರುಗಳಲ್ಲಿ ಹೆಚ್ಚಾಗಿ ನ್ಯಾಯಾಲಯ, ಸರ್ಕಾರಿ ಕಚೇರಿ, ಶಾಲಾ- ಕಾಲೇಜುಗಳಿಗೆ, ಆಸ್ಪತ್ರಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಹೋಗುವ ಉದ್ಯೋಗಿಗಳು, ವ್ಯಾಪಾರಸ್ಥರು, ಅವೆನ್ಯೂ ರೋಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ನಡೆಸುತ್ತಿರುವವರರಿದ್ದು, ಸದರಿಯವರುಗಳು ಸಮಯಕ್ಕೆ ಸರಿಯಾಗಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗಲು ಹಾಗೂ ಬರಲು ತುಂಬಾ ಕಷ್ಟಕರವಾಗಿರುತ್ತದೆ.

ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗವಾಗಿ ಬಸ್ಸುಗಳ ಸಂಚಾರ ಇದ್ದು, ಆದರೆ, ಪ್ರಸ್ತುತ ಸಮಯಕ್ಕೆ ಸರಿಯಾಗಿ ಬಸ್ಸುಗಳು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ.ಯ ಸಿಬ್ಬಂದಿಯನ್ನು ವಿಚಾರಿಸಲಾಗಿ, ಚಿಕ್ಕಬಳಾಪುರ ವಿಭಾಗಕ್ಕೆ ಸದರಿ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಅಲ್ಲಿಂದ ಸರಿಯಾಗಿ ಯಾವುದೇ ಬಸ್ಸುಗಳ ಸೇವೆ ಹಾಗೂ ಬಸ್ಸುಗಳಿಗೆ ಬೇಕಾಗುವ ಬಿಡಿ ಭಾಗಗಳು ಸರಿಯಾಗಿ ವಿತರಿಸದೇ ಇರುವುದೇ ಕಾರಣವೆಂದು ತಿಳಿಸಿರುತ್ತಾರೆ.

ಆದ್ದರಿಂದ, ಈ ಮೊದಲು ಬೆಂಗಳೂರಿನ ಕೇಂದ್ರ ವಿಭಾಗಕ್ಕೆ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಈಗ ಮತ್ತೆ ಚಿಕ್ಕಬಳ್ಳಾಪುರ ವಿಭಾಗದಿಂದ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಕೋರುತ್ತೇವೆ ಹಾಗೂ ಈಗಾಗಲೇ ರದ್ದುಪಡಿಸಿರುವ ಬಸ್ಸುಗಳ ರೂಟ್ (ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ) ಬಸ್ಸುಗಳನ್ನು ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳ ಸೇವೆಯನ್ನು ದೊಡ್ಡಬಳ್ಳಾಪುರದಿಂದ ಕಾವೇರಿ ಭವನಕ್ಕೆ ಬೆಳಿಗ್ಗೆ 07-09 ಗಂಟೆಯವರೆಗೆ ಹಾಗೂ ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಸಂಜೆ 6-8ಗಂಟೆಯವರೆಗೆ ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತ್ವರಿತವಾಗಿ ಸ್ಪಂದಿಸಿ ಜಿಲ್ಲಾ ಸಾರಿಗೆ ವ್ಯವಸ್ಥಾಪಕರಿಗೆ ಕರೆಮಾಡಿ ಹೆಚ್ಚುವರಿ ಬಸ್ಸುಗಳನ್ನು ಒಂದು ವಾರದ ಒಳಗಾಗಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

13 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

23 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago