ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯನ್ನಾಗಿ ಸೈಯಿದಾ ಅನೀಸ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಿಸಲಾಗಿದೆ.
ಆರ್.ರಂಗಪ್ಪ ಅವರ ನಿವೃತ್ತಿಯಿಂದ ತೆರವಾಗಿರುವ ಸ್ಥಾನಕ್ಕೆ ಸೈಯಿದಾ ಅನೀಸ್ ಅವರನ್ನು ನೇಮಿಸಲಾಗಿದೆ.
ಫೆ.23ರಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸೈಯಿದಾ ಅನೀಸ್ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಪುಷ್ಪಗುಚ್ಛ ನೀಡುವ ಮೂಲಕ ಅಭಿನಂದಿಸಿದರು.