ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸಾದಿಕ್ ಪಾಷಾ ಅವರು ಅಧಿಕಾರ ವಹಿಸಿಕೊಂಡರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಮುಂದಾಗಿ, ಕೆಲ ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದ ಮುನಿಕೃಷ್ಣ ಅವರನ್ನು ಸಹ ವರ್ಗಾವಣೆ ಮಾಡಲಾಗಿತ್ತು. ಮುನಿಕೃಷ್ಣ ಅವರ ಜಾಗಕ್ಕೆ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾದಿಕ್ ಪಾಷಾ ಅವರನ್ನು ನೇಮಿಸಲಾಗಿದೆ.
ಸರ್ಕಾರ ಆದೇಶ ಮೇರೆಗೆ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ತಮ್ಮ ಅಧಿಕಾರವನ್ನ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರಿಗೆ ಹಸ್ತಾಂತರಿಸಿ ಶುಭಕೋರಿದರು.
ಅದೇರೀತಿ ಗ್ರಾಮಾಂತರ ಠಾಣೆಯ ನೂತನ ಇನ್ಸ್ ಪೆಕ್ಟರ್ ಅಗಿ ಅಧಿಕಾರ ವಹಿಸಿಕೊಂಡ ಸಾದಿಕ್ ಪಾಷಾ ಅವರಿಗೆ ಹೂಗುಚ್ಚ ನೀಡಿ ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.