ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೊಡ್ಡಬಳ್ಳಾಪುರದ ಬಸವೇಶ್ವರನಗರದ ನಿವಾಸಿ ಸುಷ್ಮಾ ಮಹೇಶ್ (24) ದುರಂತ ಸಾವಗೀಡಾದ ತುಂಬು ಗರ್ಭಿಣಿ.
ಆಕೆಗಿದು ಮೊದಲ ಮಗು, ಇನ್ನೇನು ಮನೆಗೆ ಹೊಸ ಅತಿಥಿಯ ಆಗಮನ ಆಗುತ್ತದೆ ಎಂದು ಕುಟುಂಬಸ್ಥರು ಖುಷಿ ಖುಷಿಯಾಗಿದ್ದರು. ಆದರೆ ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಎರಡು ಜೀವಗಳನ್ನ ಬಲಿ ಪಡೆದಿದೆ. ತಾಯಿ ಮತ್ತು ಮಗುವನ್ನ ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಆಸ್ಪತ್ರೆ ಅವರಣದಲ್ಲಿ ಮುಗಿಲು ಮುಟ್ಟಿದೆ.
ಮೃತ ಸುಷ್ಮಾಳನ್ನ ಬೆಂಗಳೂರಿನ ಮಹೇಶ್ ಎಂಬುವರಿಗೆ ಮದುವೆ ಮಾಡಿಕೊಡಲಾಗಿತ್ತು, ಚೊಚ್ಚಲ ಹೆರಿಗೆಗಾಗಿ ಆಕೆ ತವರು ಮನೆಯಾದ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು. ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸುತ್ತಿದ್ದರು. ಈಗಾಗಲೇ 9 ತಿಂಗಳು ತುಂಬಿದ ಹಿನ್ನಲೆ, ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ಸುಷ್ಮಾಳನ್ನ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಆಕೆಯನ್ನ ಪರೀಕ್ಷೆ ಮಾಡಿದ ವೈದ್ಯರು ಕೇವಲ ಒಂದು ಬಿಪಿ ಮಾತ್ರೆ ಕೊಟ್ಟು ಏನು ಆಗುವುದಿಲ್ಲ ಮನೆಗೆ ಹೋಗಿ ಎಂದು ಕಳಿಸಿದ್ದಾರೆ. ನನಗೆ ನೋವು ತಡೆಯಲಾಗುತ್ತಿಲ್ಲ ನನ್ನನ್ನು ಅಡ್ಮಿಟ್ ಮಾಡಿಕೊಳ್ಳಿ ಎಂದು ಬೇಡಿಕೊಂಡರು ವೈದ್ಯರು ಏನು ಆಗುವುದಿಲ್ಲ ನೋವು ತಡೆಯಬೇಕು ಎಂದು ಹೇಳಿ ಕಳಿಸಿದ್ದರು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
ಇಂದು ಮುಂಜಾನೆ ಸಮಯದಲ್ಲಿ ನೋವು ತಾಳಲಾರದೆ ಸುಷ್ಮಾ ರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಾಗ ಯಾವುದೇ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ, ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮಗಳು ಮತ್ತು ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ಮೃತಳ ತಾಯಿ ಭಾಗ್ಯಮ್ಮ ಕಣ್ಣೀರು ಹಾಕಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…