2023ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೇಯಲ್ಲಿ 625 ಅಂಕಗಳಿಗೆ 618 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಆಗುವ ಮೂಲಕ ತಾಲೂಕು, ಶಾಲೆಗೆ, ಪೋಷಕರಿಗೆ ಕೀರ್ತಿ ತಂದಿರುವ ತಾಲೂಕಿನ ದೇವಲ ಮಹರ್ಷಿ ಶಾಲಾ ವಿದ್ಯಾರ್ಥಿ ವಿನಯ ಪ್ರಕಾಶ್.
ಮೇ.8ರಂದು 2023ರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಫಲಿತಾಂಶದಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಎಲ್ಲರ ಅಭಿನಂದನೆಗೆ ಪಾತ್ರನಾಗಿರುವ ವಿನಯ್ ಪ್ರಕಾಶ್.
ವಿನಯ್ ಇಷ್ಟಪಟ್ಟು ಅಭ್ಯಾಸ ಮಾಡಿ ತಾಲೂಕಿಗೆ ಒಳ್ಳೆ ಫಲಿತಾಂಶ ತಂದಿರುವುದು ಸಂತಸ ತಂದಿದೆ. ಮನೆಯಲ್ಲಿ ನಾವು ಓದು ಎಂದು ಎಂದೂ ಒತ್ತಡ ಹೇರಲಿಲ್ಲ. ಎಲ್ಲೂ ಟ್ಯೂಷನ್ ಗೆ ಹೋಗದೆ, ಶಾಲಾ ಶಿಕ್ಷಕರು ಹೇಳಿಕೊಟ್ಟ ಪಾಠ ಹಾಗೂ ಮನೆಯಲ್ಲಿ ಉತ್ತಮ ಅಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾನೆ ಎಂದು ಟಾಪರ್ ವಿನಯ್ ಪ್ರಕಾಶ್ ತಂದೆ ಪ್ರಕಾಶ್ ಮಗನ ಸಾಧನೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದರು.
ನಂತರ ಟಾಪರ್ ವಿನಯ್ ಪ್ರಕಾಶ್ ಮಾತನಾಡಿ, ಈ ಸಾಧನೆಗೆ ನನ್ನ ಶಿಕ್ಷಕರು, ಪೋಷಕರು ಕಾರಣ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಇನ್ನೂ ಹೆಚ್ಚು ಅಂಕ ಬರಬಹುದು ಎಂದು ನಿರೀಕ್ಷಿಸಿದ್ದೆ ಆದರೆ 618 ಅಂಕ ಬಂದಿರುವುದು ಖುಷಿಕೊಟ್ಟಿದೆ, ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನೂ ಕಠಿಣ ಪರಿಶ್ರಮದಿಂದ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸುವೆ ಎಂದು ತಿಳಿಸಿದರು.
ಭವಿಷ್ಯದಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಮಾಡುವ ಬಯಕೆ ಇದೆ, ಈ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡುತ್ತೇನೆ, ಓದುವ ಜೊತೆ ಪೆನ್ಸಿಲ್ ಸ್ಕೆಚ್, ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುತ್ತೇನೆ ಎಂದರು.
ಮಗನ ಈ ಸಾಧನೆಗೆ ಆನಂದದಲ್ಲಿ ಮಿಂದೆದ್ದ ಪೋಷಕರು.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…