ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್ ಡಿ ಉಪ್ಪಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇವರೊಂದಿಗೆ ಉಪಾಧ್ಯಕ್ಷರನ್ನಾಗಿ ಕೊತ್ತೂರಪ್ಪ, ಜೆ.ಮುನಿರಾಜು, ಎಂ. ಮುನಿಸ್ವಾಮಿ ಆಯ್ಕೆಗೊಂಡರೆ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಪ್ಪ, ಕಾರ್ಯದರ್ಶಿ ಪುರುಷೋತ್ತಮ ಗೌಡ, ಪುರುಷೋತ್ತಮ್ ಟಿ.ವಿ., ಸೈಯದ್ ಅಬ್ದುಲ್ ರೆಹಮಾನ್, ಕೃಷ್ಣಮೂರ್ತಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎ. ಉಮೇಶ್, ಎಂ.ಮುನಿಯಪ್ಲ, ಪ್ರದೀಪ್, ಗಂಗಾಧರ್, ಶ್ರೀನಿವಾಸ್ ತರಿದಾಳ್, ಗಂಗರಾಜು ಅವರನ್ನು ಆಯ್ಕೆ ಮಾಡಲಾಯಿತು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳಿಗೆ ಹೂಗುಚ್ಛ ನೀಡುವ ಮೂಲಕ ಅಭಿನಂದಿಸಲಾಯಿತು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್, ಮುರಳಿ ಮೋಹನ್, ಗೌರವ ಅಧ್ಯಕ್ಷ ಷಫಿ, ನಿರ್ದೇಶಕರಾದ ಜಿಕೆ ಸುಗ್ಗರಾಜು, ಆನಂದ್ ವೈ, ದೇವರಾಜ್, ರಾಘವೇಂದ್ರ ಚಾರ್, ಸತೀಶ್, ದಿನ್ನೋರ್ ಮಂಜುನಾಥ್, ರಮೇಶ್ ಬೀದಿ ಮನೆ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಶ್ರೀಕಾಂತ್ ಮತ್ತಿತರರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…