ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ವಿವಿಧ ಘಟಕಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಸ್ಥಾನಕ್ಕೆ ಮುಖಂಡರನ್ನು ಆಯ್ಕೆ ಮಾಡಲಾಯಿತು.
ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಆರ್. ಆನಂದಮೂರ್ತಿ, ತಾಲ್ಲೂಕು ರೈತ ಮೋರ್ಚಾ ಉಪಾಧ್ಯಕ್ಷರಾಗಿ ರಾಜಗೋಪಾಲ್ (ಪಾಲಿ) ತಾಲೂಕು ಉಪಾಧ್ಯಕ್ಷರಾಗಿ ಸಿದ್ದರಾಮಣ್ಣ, ತಾಲೂಕು ಓಬಿಸಿ ಮೋರ್ಚಾ ಅಧ್ಯಕ್ಷರಾಗಿ ಎಸ್.ಎಸ್.ಟಿ. ಮಂಜುನಾಥ್, ತಾಲೂಕು ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕನಸವಾಡಿ ರಾಜಣ್ಣ, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷರಾಗಿ ನಾಗರಾಜ ಬಾಬು, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್ ಅವರನ್ನು ನೇಮಿಸಲಾಗಿದೆ.
ನೂತನವಾಗಿ ದೊಡ್ಡಬಳ್ಳಾಪುರ ತಾಲೂಕು ಬಿಜೆಪಿ ವಿವಿಧ ಘಟಕಗಳಿಗೆ ಆಯ್ಕೆಯಾದವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ವೇಳೆ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ನಾಗೇಶ್, ಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ಸೇರಿದಂತೆ ಇತರರು ಆಯ್ಕೆಯಾದ ಎಲ್ಲರಿಗು ಶುಭಕೋರಿದ್ದಾರೆ.
ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಸಂತೋಷದ ವಿಷಯ. ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತೇನೆ. ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತೇನೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೂ ತಲುಪಿಸುವ ಕಾರ್ಯ ಮಾಡಲಾಗುವುದು. ಶಾಸಕ ಧೀರಜ್ ಮುನಿರಾಜ್ ಮಾರ್ಗದರ್ಶನದಲ್ಲಿ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಯುವಕರಿಗೆ ಸಿಗುವಂತೆ ಮಾಡಲಾಗುವುದು ಎಂದು ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್ ತಿಳಿಸಿದರು.