ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಮಕ್ಕಳ ಸಹಾಯವಾಣಿ-1098 ಇವರು ಜಂಟಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು.
ಈ ತಪಾಸಣೆ ವೇಳೆ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಿದರು.
ಅಲ್ಲದೇ, ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ರೂ. 20,000/- ಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ರೂ. 50,000/- ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಾಗೃತಿ ಮೂಡಿಸಿದರು.
ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದರು.
ಈ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ
ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ್ ಹಾಗೂ ಸೌಮ್ಯ ಹಾಜರಿದ್ದರು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…