ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

 

ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ಹಾಗೂ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ದೊಡ್ಡಬಳ್ಳಾಪುರ ಟೌನ್ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿ ಅಧಿಕಾರಿಗಳ ಶ್ರಮ, ಕಾಯಕನಿಷ್ಠೆ ‌ಹಾಗೂ ಪ್ರಾಮಾಣಿಕ ಪ್ರಯತ್ನದಿಂದಾಗಿ ದೊಡ್ಡಬಳ್ಳಾಪುರದ ತಾಲ್ಲೂಕು ಆಸ್ಪತ್ರೆಗೆ ರಾಷ್ಟ್ರ ಮಟ್ಟದ ಗರಿ ಲಭಿಸಿದೆ. ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಜಿಲ್ಲೆಗೆ ಮಾದರಿಯಾಗುವಂತೆ ಕಾರ್ಯನಿರರ್ವಹಿಸಬೇಕು.
ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ ಪರಿಪಾಲನೆ ಮಾಡಬೇಕು. ದೊಡ್ಡಬಳ್ಳಾಪುರದ‌ ಸರ್ಕಾರಿ ಆಸ್ಪತ್ರೆ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಮುಂಚೂಣಿಯಲ್ಲಿದೆ, ಈ ಸೇವೆ ಇದೇ ರೀತಿ ಮುಂದಿನ ದಿನಗಳಲ್ಲೂ ಮುಂದುವರೆಯಲಿ ಎಂದು ವೈದ್ಯಾಧಿಕಾರಿಗಳಿಗೆ ಅಭಿನಂದಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆಗೆ ಈಗಾಗಲೇ ಶಿಲಾನ್ಯಾಸ ರೂಪುಗೊಂಡಿದ್ದು, ಶೀಘ್ರವೇ ಮಂಜೂರಾತಿಗಾಗಿ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಉಪಯೋಗವಾಗಲಿದೆ. ದೊಡ್ಡಬಳ್ಳಾಪುರ ನಗರ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ಅಪಘಾತಗಳ ಸಂಭವ ಹೆಚ್ಚಾಗಿ ಕಂಡುಬರುತ್ತಿದೆ‌. ಇದರಿಂದಾಗಿ ಕೇಂದ್ರ ಸರಕಾರ ವತಿಯಿಂದ ಕ್ರಿಟಿಕಲ್ ಕೇರ್ ಯುನಿಟ್ ಸಹ ಸ್ಥಾಪಿತವಾಗಲಿದ್ದು, ಜನರಿಗೆ ಇದು ಉಪಯೋಗವಾಗಲಿದೆ.
ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸಾರ್ವಜನಿಕರಿಗೆ ಲಕ್ಷಾಂತರ ರೂಗಳ ಖರ್ಚು ತಪ್ಪಲಿದೆ ಎಂದು ಸಚಿವರು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಶಾಸಕ ಧೀರಜ್ ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ
ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆ ಅತ್ಯುತ್ತಮ ಸೇವೆ ಸಲ್ಲಿಸುತ್ತಾ ಬಂದಿದೆ. ಇಲ್ಲಿನ ಅಧಿಕಾರಿಗಳ ಸಹಭಾಗಿತ್ವದಲ್ಲಿ ಕಳೆದ ಮೂರು ತಿಂಗಳ ಹಿಂದಷ್ಟೆ ಕೇಂದ್ರ ಸರಕಾರದ ಆರೋಗ್ಯ ಇಲಾಖೆಯ ವತಿಯಿಂದ ತಾಲ್ಲೂಕು ಮಟ್ಟದ ಅತಿ ಉತ್ತಮ ಆಸ್ಪತ್ರೆ ಎಂದು ಬಿರುದು ಪಡೆದುಕೊಂಡಿದೆ. ನಮ್ಮ ಸುತ್ತ ಮುತ್ತಲು ಇರುವ ಮೂರು ಜಿಲ್ಲೆಗಳಿಗಿಂತ ಅತಿ ಹೆಚ್ಚು ಮಕ್ಕಳ ಜನನ ಆಗುತ್ತಿರುವ ಆಸ್ಪತ್ರೆ ಇದಾಗಿದೆ. ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪಾತ್ರವಾಗಿದೆ ಎಂದರು.

ದೊಡ್ಡಬಳ್ಳಾಪುರ ನಗರದ ಸಿದ್ದೇನಾಯಕನಹಳ್ಳಿಯಲ್ಲಿ 195 ಕೋಟಿ ರೂ ಗಳ ವೆಚ್ಚದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೆ ಒಪ್ಪಿಗೆ ನೀಡಿದೆ. ಇದಲ್ಲದೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅಭಿಮ್ ಯೋಜನೆಯಡಿಯಲ್ಲಿ 50 ಹಾಸಿಗೆಯುಳ್ಳ ಕ್ರಿಟಿಕಲ್ ಕೇರ್ ಯುನಿಟ್(CCU) ಆಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಮುಂಬರುವ ದಿನಗಳಲ್ಲಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.

*ಆರೋಗ್ಯ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳ ಮೊತ್ತ ಹಾಗೂ ವಿವರ*

ಜಿಲ್ಲೆಯ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಗೆ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2,10,60,000 ರೂಗಳು ಹಾಗೂ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಕನಸವಾಡಿಗೆ ಮೂಲಭೂತ ಸೌಕರ್ಯಗಳ ಉನ್ನತೀಕರಣಕ್ಕಾಗಿ ಒಟ್ಟು 60,28,900 ಲಕ್ಷ ರೂ. ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಡಬಳ್ಳಾಪುರಕ್ಕೆ ಮೂಲಸೌಕರ್ಯಗಳ ಉನ್ನತೀಕರಣಕ್ಕಾಗಿ ಒಟ್ಟು 61,10,000 ರೂ ಮತ್ತು
ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2,24,82,000 ಕೋಟಿ ರೂ ವೆಚ್ಚ ಸೇರಿ ಜಿಲ್ಲೆಗೆ ಮಂಜೂರಾಗಿರುವ ಒಟ್ಟು ಮೊತ್ತ ರೂ 5,56,80,900 ಕೋಟಿ ರೂ ಗಳಾಗಿರುತ್ತದೆ.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಬಿ.ರಾಜಣ್ಣ, ದೊಡ್ಡಬಳ್ಳಾಪುರ ಉಪ‌ವಿಭಾಗಾಧಿಕಾರಿ ದುರ್ಗಾಶ್ರೀ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್,‌ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ನಗರಸಭೆ ಆಯುಕ್ತರಾದ ಕಾರ್ತಿಕ್ ಈಶ್ವರ್ ಸೇರಿದಂತೆ ನಗರಸಭಾ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

9 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

10 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

19 hours ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

1 day ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

2 days ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

2 days ago