ದೊಡ್ಡಬಳ್ಳಾಪುರ ತಾಲ್ಲೂಕು ಆರೋಗ್ಯಧಿಕಾರಿಗಳ ಕಚೇರಿಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿರುವ ತಾಲ್ಲೂಕು ಆರೋಗ್ಯಧಿಕಾರಿಗಳ ಕಚೇರಿಯಲ್ಲಿ ಇಂದು ಬೆಳಗಿನಜವದಲ್ಲಿ ಗೇಟ್ ಬೀಗ ಮುರಿದು ಕಳ್ಳತನಕ್ಕೆಯತ್ನಿಸಿರುವ ಘಟನೆ ನಡೆದಿದೆ.

ಕಚೇರಿ ಹೊರಗಿನ ಗೇಟ್ ಬೀಗ ಮುರಿದು ಕಂಪೌಂಡ್ ಒಳಗೆ ನಿಲ್ಲಿಸಿದ್ದ 2 ಬೈಕ್ ಗಳನ್ನು ತಳ್ಳಿ ಮುಖ್ಯ ದ್ವಾರದ ಬೀಗ ಮುರಿಯಲು ಯತ್ನಿಸಿದ್ದಾರೆ. ಕಚೇರಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು, ಕೆಲಸಗಾರನ್ನು ಕಂಡು ಕಳ್ಳರು ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ನಗರ ಠಾಣೆಯಲ್ಲಿ ದೂರು ದಾಖಲಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Leave a Reply

Your email address will not be published. Required fields are marked *

error: Content is protected !!