ದೊಡ್ಡಬಳ್ಳಾಪುರ‌ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಾದ ಬೀದಿನಾಯಿಗಳ ಹಾವಳಿ: ಜನ ಕಕ್ಕಾಬಿಕ್ಕಿ: ನಾಯಿಗಳ ಉಪಟಳಕ್ಕೆ ಕಡಿವಾಣ ಹಾಕಲು ಜನ ಮನವಿ

ದೊಡ್ಡಬಳ್ಳಾಪುರ‌ ನಗರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ.

ನಗರಸಭಾ ಆಡಳಿತ ಕಚೇರಿ ಕೂಗಳತೆ ದೂರದಲ್ಲಿರುವ ಮಾರುತಿನಗರ ಸಮೀಪ‌ ಹಾದುಹೋಗುವ ಕೋರ್ಟ್ ರಸ್ತೆಯಲ್ಲಿ ಗುಂಪುಗುಂಪಾಗಿ ನಾಯಿಗಳು ನಡು ರಸ್ತೆಯಲ್ಲಿ ನಿಂತು ಜನ ಓಡಾಡುವಾಗ ಮತ್ತು ವಾಹನ ಚಲಾಯಿಸುವ ವೇಳೆ ಹಿಂಬಾಲಿಸಿಕೊಂಡು ಬೊಗಳುತ್ತವೆ.

ಈ ರಸ್ತೆಯಲ್ಲಿ ಪ್ರತಿನಿತ್ಯ ನಾಯಿಗಳ ದಂಡು ಬೀಡು ಬಿಟ್ಟಿರುತ್ತದೆ. ಈ ಪ್ರದೇಶಗಳಲ್ಲಿ ಜನ ಓಡಾಡಲು ಭಯಪಡುತ್ತಾರೆ. ಸೈಕಲ್‌ ಮತ್ತು ಬೈಕ್‌ ಸಂಚರಿಸುವ ವೇಳೆ ಹಿಂಬಾಲಿಸಿಕೊಂಡು ಬಂದು ದಾಳಿ ನಡೆಸುತ್ತವೆ. ಈ ಘಟನೆಯಲ್ಲಿ ಹಲವು ಮಂದಿ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ರಾತ್ರಿ ವೇಳೆ ನಾಯಿಗಳ ಕೂಗಾಟ, ಚೀರಾಟದಿಂದ ನೆಮ್ಮದಿಯ ನಿದ್ದೆ ಮಾಡಿ ಹಲವು ತಿಂಗಳು ಕಳೆದಿದೆ. ನಾಯಿಗಳ ಉಪಟಳಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

8 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

10 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

13 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

14 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

21 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

21 hours ago