ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ ಅಂಗೀಕರಿಸಿದ್ದಾರೆ.
ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ನಿಯಮ 40ರ ಅನ್ವಯ ಸುಮಿತ್ರಾ ಕೆ. ಆನಂದ್ ಅವರು ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷೆಯಾಗಿ ಮುಂದುವರಿದು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ, ಯಾವುದೇ ಒತ್ತಡಕ್ಕೆ ಮಣಿಯದೆ ಸ್ವಇಚ್ಛೆಯಿಂದ ಜೂನ್ 1ರಂದು ರಾಜೀನಾಮೆ ಸಲ್ಲಿಸಿದ್ದರು.
ಅಧಿನಿಯಮದ ನಿಯಮ 40(2)ರ ಪ್ರಕಾರ ರಾಜೀನಾಮೆ ಸಲ್ಲಿಸಿದ ದಿನಾಂಕದಿಂದ ಹತ್ತು ದಿನಗಳ ಅವಧಿಯೊಳಗೆ ಅದನ್ನು ಹಿಂಪಡೆಯುವ ಅವಕಾಶವಿದ್ದು, ಜೂನ್ 10ರೊಳಗೆ ಸುಮಿತ್ರಾ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯದಿರುವುದು ದಾಖಲಾಗಿದೆ. ಅಲ್ಲದೆ, ರಾಜೀನಾಮೆ ಪತ್ರದಲ್ಲಿರುವ ಸಹಿಯನ್ನು ನಗರಸಭೆ ಪೌರಾಯುಕ್ತರು ದೃಢೀಕರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾನೂನುಬದ್ಧ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಲಾದ ರಾಜೀನಾಮೆಯನ್ನು ಅಂಗೀಕರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ರಾಜೀನಾಮೆ ಅಂಗೀಕಾರದೊಂದಿಗೆ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತು ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗಳು ಆರಂಭವಾಗಿವೆ.
ಮುಖ್ಯವಾಗಿ ಇಂದು (ಜೂ.17ರ ಬುಧವಾರ) ನಗರಸಭೆ ಸರ್ವ ಸದಸ್ಯರ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕರೆದಿರುವುದು ವಿಪರ್ಯಾಸವಾಗಿದೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ.
ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…