ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತ ಪರಮೇಶ್ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಕಾರ್ತಿಕೇಶ್ವರ್ ಅವರು ನೇಮಕಗೊಂಡು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ನೂತನ ಪೌರಾಯುಕ್ತರಿಗೆ ನಗರಸಭೆಯ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದರು. ಅಧಿಕಾರ ವಹಿಸಿಕೊಂಡ ನಂತರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಪೂಜಾ ಕಾರ್ಯಕ್ರಮದಲ್ಲಿ ನಗರಸಭೆಯ ಅಧಿಕಾರಗಳಾದ ವೀರಣ್ಣ ಮತ್ತು ರೇವಣ್ಣ, ದೇವಾಲಯದ ಸಿಬ್ಬಂದಿ ನಂಜಪ್ಪ, ಮುತ್ತಣ್ಣ, ಗಂಗಾಧರ್ ಉಪಸ್ಥಿತರಿದ್ದರು.