ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ದೊಡ್ಡಬಳ್ಳಾಪುರ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ವ್ತಾಪ್ತಿಯ ರೌಡಿಶೀಟರ್ ಗಳನ್ನು ಠಾಣೆಗೆ ಕರೆಸಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಇರಬೇಕು. ಒಂದು ವೇಳೆ ಕಾನೂನಿನ ಎಲ್ಲೆ ಮೀರಿ ನಡೆದುಕೊಂಡರೆ ತಕ್ಕ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಎಚ್ಚರಿಕೆ ನೀಡಿದರು.
ರೌಡಿ ಪರೇಡ್ ನಲ್ಲಿ ಇಪ್ಪತ್ತಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪಾಲ್ಗೊಂಡಿದ್ದರು. ಹತ್ತು ವರ್ಷಗಳ ಕಾಲ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸದಿದ್ದರೆ ರೌಡಿ ಪಟ್ಟಿಯಿಂದ ಕೈ ಬಿಡಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹೇಳಿದರು.
ಪದೇ ಪದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಮುಲಾಜಿಲ್ಲದೇ ಗಡಿಪಾರು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಈ ವೇಳೆ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.